ಹೊಸಪೇಟೆ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಡಿಸೆಂಬರ್.03 ರಂದು ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ 2025 ರ ರಾಜ್ಯ ಪ್ರಶಸ್ತಿ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಹ ಅರ್ಜಿದಾರರು ಅಕ್ಟೋಬರ್.15 ರಂದು ಸಂಜೆ 4 ಗಂಟೆಯೊಳಗೆ ಪ್ರಸ್ತಾವನೆಯನ್ನು ಸಲ್ಲಿಸಲು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿ ಎಂಆರ್‍ಡಬ್ಲೂಗಳಾದ ಹರಪನಹಳ್ಳಿಯ ಆರ್.ಧನರಾಜ್ ಮೊ.9901182525, ಕೂಡ್ಲಿಗಿ ಚೌಡೇಶ ಮೊ.9731747832, ಹಗರಿಬೊಮ್ಮನಹಳ್ಳಿ ಲಕ್ಷ್ಮಣ ಮೊ.9741185924, ಹೊಸಪೇಟೆ ಜೆ.ರವಿಕುಮಾರ ಮೊ.9945252991, ಹೂವಿನಹಡಗಲಿ ಮಂಜುನಾಥ ಮೊ.9900890403, ಕೊಟ್ಟೂರಿನ ಟಿ.ಲಕ್ಷ್ಮೀ ಮೊ.8296859012 ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ : ಹೊಸಪೇಟೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಅಗಾಫೆ ಎಜಿ ಪ್ರಾರ್ಥನಾಲಯ ಎದುರು ರಸ್ತೆ, ಡಿ.ಸಿ ರವಿ ಸಿವಿಲ್ ಇಂಜಿನಿಯರ್ ಕಟ್ಟಡ, ಅಮರಾವತಿಯಲ್ಲಿ ಇವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಲು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್