ಮದರಸಾಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ರಾಯಚೂರು, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ ಫೌಂಡೇಶನ್ ಆಯ್ಕೆ ಮಾಡಿರುವ ಮದರಸಾಗಳಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ
ಮದರಸಾಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ


ರಾಯಚೂರು, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ ಫೌಂಡೇಶನ್ ಆಯ್ಕೆ ಮಾಡಿರುವ ಮದರಸಾಗಳಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೆಂಗಳೂರು ನಗರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣದೊಂದಿಗೆ ಎನ್‍ಐಒಎಸ್ ಮುಖಾಂತರ ಔಪಚಾರಿಕ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಅಜೀಂ ಪ್ರೇಮ್ ಜೀ ಫೌಂಡೇಶನ್ ಅವರ ಸಹಯೋಗದೊಂದಿಗೆ ಔಪಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲೀμï, ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಜಿಲ್ಲಾ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.

ಅರ್ಹತೆ: ಅಭ್ಯರ್ಥಿಗಳು, ಡಿಇಡಿ ಅಥವಾ ಬಿಇಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಉರ್ದು ಕುಶಲತೆಯನ್ನು ಹೊಂದಿರಬೇಕು. ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಅಕ್ಟೋಬರ್ 04ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಅಥವಾ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣದಲ್ಲಿ ಸಲ್ಲಿಸಬಹುದಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆಯು ಅಕ್ಟೋಬರ್ 10 ಹಾಗೂ ಫಲಿತಾಂಶವನ್ನು ಅಕ್ಟೋಬರ್ 13ರಂದು ಪ್ರಕಟಿಸಲಾಗುವುದು. ಅಲ್ಲದೆ ಅಕ್ಟೋಬರ್ 15ರಂದು ಬೋಧನಾ ಪ್ರಾತ್ಯಕ್ಷಿಕೆಯನ್ನು ಹಮ್ಮಕೊಳ್ಳಲಾಗಿದೆ. ಒಂದು ಮದರಸಾಗೆ ತಲಾ ಎರಡು ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಶಿಕ್ಷಕರು ಕನ್ನಡ, ಇಂಗ್ಲೀμï, ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಬೋಧಿಸಲು ಸಕ್ಷಮರಾಗಿರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande