ಕಲಬುರಗಿ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನ ಸಭಾ ಕ್ಷೇತ್ರದ ಹೊನಗುಂಟದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರ ಕಷ್ಟಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ ನೆರೆ ಪ್ರದೇಶಗಳ ಬಗ್ಗೆ ರಾಜ್ಯ ಸರ್ಕಾರ ಹೊಣೆಗಾರಿಕೆ ಇಲ್ಲದಂತೆ ವರ್ತಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಎಸಿ ಕೋಣೆಯಿಂದ ಹೊರಗೆ ಹಾಕಿ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಸೂಚಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕರಾದ ಬಸವರಾಜ ಮತ್ತಿಮೂಡ, ಮಾಜಿ ಸಂಸದ ಡಾ. ಉಮೇಶ್ ಜಾಧವ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ್ ನಡಹಳ್ಳಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa