ಜಾತಿಗಣತಿಗೆ ಬಿಜೆಪಿ ವಿರೋಧವಿಲ್ಲ : ಸಿ.ಟಿ.ರವಿ
ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಾತಿಗಣತಿಗೆ ಬಿಜೆಪಿ ವಿರೋಧ ಮಾಡುವುದಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಜಾತಿಗಣತಿ ವಿರೋಧ ಇಲ್ಲ. ಜಾತಿಗಣತಿ ಹೆಸರಿನಲ್ಲಿ ಸಮಾಜ ಒಡೆಯಲು ಮುಂದಾಗಿರುವುದಕ್ಕೆ ಮಾತ್
Ct ravi


ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಾತಿಗಣತಿಗೆ ಬಿಜೆಪಿ ವಿರೋಧ ಮಾಡುವುದಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಜಾತಿಗಣತಿ ವಿರೋಧ ಇಲ್ಲ. ಜಾತಿಗಣತಿ ಹೆಸರಿನಲ್ಲಿ ಸಮಾಜ ಒಡೆಯಲು ಮುಂದಾಗಿರುವುದಕ್ಕೆ ಮಾತ್ರ ನಮ್ಮ ವಿರೋಧ ಇದೆ. ಜಾತಿ ಒಡೆಯುವುದು, ಹೊಸ ಜಾತಿ ಸೃಷ್ಟಿ ಮಾಡುವುದು, ಹಿಂದೂ ಜಾತಿಗಳನ್ನ ಕ್ರಿಶ್ಚಿಯನ್ ಜಾತಿಗೆ ಸಮೀಕರಣ ಮಾಡುವುದು. ಹಿಂದೂಗಳನ್ನ ಒಡೆಯುವುದು, ಒಳ ಜಾತಿ ಒಡೆಯುವುದಕ್ಕೆ ನಮ್ಮ ವಿರೋಧ ಇದೆ. ಸಮೀಕ್ಷೆಗೆ ವಿರೋಧ ಇಲ್ಲ ಎಂದರು.

ನಾವು ಸಾಮಾಜಿಕ ನ್ಯಾಯದ ಪರ ಇದ್ದೇವೆ. ಕಾಂಗ್ರೆಸ್‌ನವರಿಗೆ ಬದ್ಧತೆ ಇಲ್ಲ. ಕಾಂಗ್ರೆಸ್‌ನವರಿಗೆ ಬದ್ಧತೆ ಇದ್ದಿದ್ದರೆ ಕಾಂತರಾಜು ವರದಿ ಯಾಕೆ ಕಸದ ಬುಟ್ಟಿಗೆ ಹಾಕುತ್ತಿದ್ದರು? ನಾಗಮೋಹನ್ ದಾಸ್ ವರದಿ ಯಾಕೆ ತಿಪ್ಪೇಗುಂಡಿಗೆ ಸೇರುತ್ತಿತ್ತು ಎಂದು ಪ್ರಶ್ನಿಸಿದ್ದಾರೆ. ವೈಯಕ್ತಿಕ ಮಾಹಿತಿಯನ್ನು

ಹಂಚಿಕೊಳ್ಳುವುದು ಸಾರ್ವಜನಿಕರಿಗೆ ವಿವೇಚನೆಗೆ ಬಿಟ್ಟಿದ್ದು. ಆದರೆ ಬಿಜೆಪಿ ನಿರ್ಣಯ ತೆಗೆದುಕೊಂಡಿದೆ, ಜಾತಿಗಣತಿಗೆ ನಮ್ಮ ವಿರೋಧ ಇಲ್ಲ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande