ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಹಾಸಿಗೆ, ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ಒದಗಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ.
ನ್ಯಾಯಾಲಯ ನೀಡಿದ ಕನಿಷ್ಠ ಸವಲತ್ತುಗಳ ಆದೇಶವನ್ನು ಪಾಲಿಸದೆ ಜೈಲಧಿಕಾರಿಗಳು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಜೈಲು ಸೂಪರಿಂಟೆಂಡೆಂಟ್ ಸುರೇಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ವಿಚಾರಣೆ ವೇಳೆ ಎಸ್ಪಿಪಿ ಪ್ರಸನ್ನಕುಮಾರ್ ಮತ್ತು ದರ್ಶನ್ ಪರ ವಕೀಲ ಸುನೀಲ್ ವಾದ-ಪ್ರತಿವಾದ ಮಂಡಿಸಿದರು. ಬಳಿಕ ನ್ಯಾಯಾಲಯವು ಆದೇಶವನ್ನು ಅ.9ಕ್ಕೆ ಕಾಯ್ದಿರಿಸಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa