ದೇಶದಲ್ಲಿ ಪ್ರತಿವರ್ಷ ಜನ ರೇಬಿಸ್ ಮಹಾಮಾರಿಗೆ ಜನತೆ ಬಲಿಯಾಗುತ್ತಿದ್ದಾರೆ : ಗುಣಾರಿ
ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಪ್ರತಿವರ್ಷ ದಿನದಿಂದ ದಿನಕ್ಕೆ ಹೆಚ್ಚು ಜನ ರೇಬಿಸ್ ಮಹಾಮಾರಿಗೆ ಬಲಿಯಾಗುತ್ತಿದ್ದು, ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದಾಗ ನಿರ್ಲಕ್ಷಿಸದೇ ಲಸಿಕೆ ಹಾಕಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರ
ದೇಶದಲ್ಲಿ ಪ್ರತಿವರ್ಷ ಜನ ರೇಬಿಸ್ ಮಹಾಮಾರಿಗೆ ಜನತೆ ಬಲಿಯಾಗುತ್ತಿದ್ದಾರೆ : ಗುಣಾರಿ


ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಪ್ರತಿವರ್ಷ ದಿನದಿಂದ ದಿನಕ್ಕೆ ಹೆಚ್ಚು ಜನ ರೇಬಿಸ್ ಮಹಾಮಾರಿಗೆ ಬಲಿಯಾಗುತ್ತಿದ್ದು, ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದಾಗ ನಿರ್ಲಕ್ಷಿಸದೇ ಲಸಿಕೆ ಹಾಕಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿ ಅಶ್ವಿನಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸಾಯಿನ್ಸ್ ಕಾಲೇಜ್‍ನಲ್ಲಿ ಏರ್ಪಡಿಸಿದ್ದ ವಿಶ್ವ ರೇಬಿಸ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ನಾಯಿ ಕಡಿತಕ್ಕೆ ತುತ್ತಾದ 23 ಸಾವಿರ ಜನರಿಗೆ ಚಿಕಿತ್ಸೆ ನೀಡಲಾಗಿದೆ. ಸಾರ್ವಜನಿಕರು ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದ್ದಲ್ಲಿ ಲಸಿಕೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಡಾ. ಅಪ್ಪಾಸಾಹೇಬ ಇನಾಮದಾರ ಅವರು ಮಾತನಾಡಿ, ರೇಬಿಸ್ ಅನ್ನುವುದು ಸಸ್ತನಿಗಳಲ್ಲಿ ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ನೇರವಾಗಿ ನರಮಂಡಲದ ಮೇಲೆ ಬೀರಿ, ಮಿದುಳಿಗೆ ಘಾಸಿಯಾಗಿ ಸಾವು ಸಂಭವಿಸುತ್ತದೆ. ನಾಯಿ ಕಡಿತದ ಪರಿಣಾಮ ಕುರಿತು ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಎಲ್.ಎಚ್. ಬಿದರಿ ವಹಿಸಿದ್ದರು. ಜಿಲ್ಲಾ ಆಸ್ಪತ್ರ ವೈದ್ಯರಾದ ಡಾ.ಅಚ್ಯುತ ಪತ್ತಾರ, ನರ್ಸಿಂಗ್ ಕಾಲೇಜಿನ ಪ್ರಾಂಶುಪರಾದ ಡಾ.ರಜನಿದೇವಿ ಹಿರೇಮಠ, ಡಾ.ಎಂ.ಬಿ.ಬಿರಾದಾರ, ಆರೋಗ್ಯ ಇಲಾಖೆಯ ಜಾನ್ ಕಟವಟಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಗಂಗಾಧರ ಕೋಳೂರ, ಡಾ.ಪ್ರಿಯದರ್ಶಿನಿ ಕೆಂಚರಡ್ಡಿ, ಡಾ. ಸುರೇಶ ಪಾಶ್ಚಾಪುರ, ಆರ್.ವಿ.ಹೊನವಾಡ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಕಾಲೇಜಿನ ಬೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀಕಾಂತ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಎನ್.ಆರ್.ಬಾಗವಾನ್ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande