ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಾಲಕ್ಕೆ ಹೆದರಿ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಬಾಗಲೂರ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ರೈತ ಭಾಗಣ್ಣ ಮಲ್ಕಪ್ಪ ಮಾದರ ವಯಾ 52 ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕಿನಲ್ಲಿ 10 ಲಕ್ಷ, ಕೈಸಾಲ 5 ಲಕ್ಷ ಮಾಡಿಕೊಂಡಿದ್ದರು.
ಭೀಮಾ ನದಿ ನೀರಿನ ಪ್ರವಾಹದಿಂದ ನಾಲ್ಕು ಎಕರೆ ಜಮೀನಿನಲ್ಲಿ ಇದ್ದ ಹತ್ತಿ ಬೆಳೆ ಸಂಪೂರ್ಣ ನಾಶವಾಗಿತ್ತು. ಹತ್ತಿ ಮಳೆಗೆ ಕೊಚ್ಚಿ ಹೋಗಿದರಿಂದ ಸಾಲಭಾದೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande