ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ್ಞಾನ ಸಿಂಚನ ಹಳೆ ವಿದ್ಯಾರ್ಥಿಗಳ ಸಂಘದಿಂದ ಇಂದು ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ಶಿಕ್ಷಕರ ದಿನಾಚರಣೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಉದ್ಘಾಟಿಸಿ ನಂತರ ಮಾತನಾಡಿದ ಅವರು ಇದೇ ಕಾಲೇಜಿನಲ್ಲಿ ಉಪನ್ಯಾಸಕರಾದವರಿಗೆ ಸನ್ಮಾನ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ. ನಿಮ್ಮ ಸಂಘದಿಂದ ನಮ್ಮ ಬಳ್ಳಾರಿ ನಗರದ ಅಭಿವೃದ್ಧಿಗೆ ಸಹಕಾರ ನೀಡಿ, ಕಾಲೇಜಿನಲ್ಲಿ ಬಡ ವಿದ್ಯಾರ್ಥಿಗಳು ಹೆಚ್ಚಾಗಿ ಇಲ್ಲಿ ಅಭ್ಯಾಸ ಮಾಡುತ್ತಿದ್ದಾರೆ ಎಂದರು.
ಈಗಾಗಲೆ ಏಳು ಕೋಟಿ ಅನುದಾನ ನೀಡಿದೆ ಕಾಲೇಜಿನ ಸಭಾಂಗಣಕ್ಕೆ ಒಂದು ವರೆ ಕೋಟಿ ರೂ ವೆಚ್ಚದಲ್ಲಿ ಇನ್ನಿತರ ಕಾಮಗಾರಿ ಮಾಡಲಿದೆ. ಈ ಕಾಲೇಜು ಅಭಿವೃದ್ಧಿಗೆ ನನ್ನ ಸಂಪೂರ್ಣ ಸಹಕಾರ ಇದೆ. ನಮ್ಮೆಲರ ಕನಸಿನಿಂದ ಕಾಲೇಜಿನ ಸಮಗ್ರ ಅಭಿವೃದ್ಧಿ ಅಗಲಿ ಎಂದು ಹೇಳಿದರು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಹ್ಲಾದ್ ಚೌದ್ರಿ .ಜಿ, 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದು. ಕಾಲೇಜಿಗೆ ಶಾಸಕರು ಐದು ಕೋಟಿ ರೂ ಗಳ ಅನುದಾನ ಒದಗಿಸಿದ್ದಾರೆ. ಇನ್ನೂ ಹತ್ತು ಕೋಟಿ ರೂ ಅನುದಾನ ಬರುವ ನಿರೀಕ್ಷೆ ಇದೆ ಎಂದರು.
ಸಂಘದ ಸಂಚಾಲಕರು, ಉಪನ್ಯಾಸಕರಾದ ಡಾ. ಗುರುಬಸಪ್ಪ .ಎಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ. ಹಳೇ ವಿದ್ಯಾರ್ಥಿಗಳ ಸಂಘದಿಂದ ನಡೆದಿರುವ ಕಾರ್ಯಚಟುವಟಿಕೆಗಳನ್ನು ವಿವರಿಸಿ. ಇನ್ನೂ ಹೆಚ್ಚಿನ ಕಾರ್ಯಕ್ರಮ ನಡೆಸಲು ಹಳೇ ವಿದ್ಯಾರ್ಥಿಗಳು, ಜನ ಪ್ರತಿನಿಧಿಗಳು ಸಂಘಕ್ಕೆ ಹೆಚ್ಚಿನನೆರವು ನೀಡಬೇಕು ಎಂದರು.
ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವೆಂಕಟೇಶ್ ಹೆಗಡೆ ಅಧ್ಯಕ್ಷತೆವಹಿಸಿ, ಮಾತನಾಡಿದ ಅವರು ನಮ್ಮ ಸಂಘವು ಹಲವಾರು ಉದ್ದೇಶಗಳನ್ನು ಇಟ್ಟುಕೊಂಡು ಮುನ್ನಡೆಯುತ್ತಿದೆ ಇದೇ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರವನ್ನು ನೀಡುವಲ್ಲಿ ಈ ಸಂಘವು ಸದಾ ಸಿದ್ಧವಾಗಿರುತ್ತದೆ ಎಲ್ಲ ವಿದ್ಯಾರ್ಥಿಗಳು ಸಂಘ ನಿಗದಿ ಮಾಡಿದಂತಹ ನೋಂದಣಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ತುಂಬುವುದರೊಂದಿಗೆ ಸದಸ್ಯತ್ವವನ್ನು ಪಡೆದುಕೊಳ್ಳಬೇಕು ಎಂದರು.
ಹಳೆ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ವೈ. ಹನುಮಂತ ರೆಡ್ಡಿ, ಕಾರ್ಯಾಧ್ಯಕ್ಷ ಎಂ. ಕಿಶೋರ್ ಕುಮಾರ್, ಖಜಾಂಚಿ ಎನ್. ವೀರಭದ್ರಗೌಡ, ಚಾನಳು ಶೇಖರ್, ಉಪಾಧ್ಯಕ್ಷ ಜಿ.ಆನಂದಕುಮಾರ್ ವೇದಿಕೆ ಮೇಲೆ ಇದ್ದರು. ಮತ್ತು ಈ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳಾದ ಕಗ್ಗುಲ್ಲು ಮಂಜುನಾಥ,ಮಲ್ಲ ರೆಡ್ಡಿ, ಗಂಗಧಾರ, ರಫಿಕ್,ಕೇಶವ, ಶಿವಕುಮಾರ್ ಎಚ್,ಎಸ್. ಮುಂತಾದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್