ಯುಕ್ತದಾರ ತಂತ್ರಾಂಶ ಕುರಿತು ತರಬೇತಿ ಕಾರ್ಯಾಗಾರಕ್ಕೆ ಜಿ.ಪಂ ಸಿಇಓ ಕುರೇರ್ ಚಾಲನೆ
ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಹಮ್ಮಿಕೊಂಡ ಯುಕ್ತದಾರ ತಂತ್ರಾಂಶ ಕುರಿತ ಒಂದು ದಿನದ ಕಾರ್ಯಾಗಾರಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಚಾಲನೆ ನೀಡಿದರು. ನಗರದ ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಹಮ್ಮ
ಚಾಲನೆ


ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಹಮ್ಮಿಕೊಂಡ ಯುಕ್ತದಾರ ತಂತ್ರಾಂಶ ಕುರಿತ ಒಂದು ದಿನದ ಕಾರ್ಯಾಗಾರಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಚಾಲನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು , ಕೇಂದ್ರ ಗ್ರಾಮೀಣ ಅಭಿವೃದ್ದಿ ಮಂತ್ರಾಲಯ ಹಾಗೂ ಕರ್ನಾಟಕ ಅಬಿವೃದ್ದಿ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಐಎಸ್ ಆಧಾರಿತ ಕಾಮಗಾರಿಗಳನ್ನು ಯುಕ್ತದಾರ ತಂತ್ರಾ0ಶದಲ್ಲಿ ವೈಜ್ಞಾನಿಕವಾಗಿ ತಯಾರಿಸ ಬೇಕಾಗಿರುವದರಿಂದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಅದರ0ತೆ ೨೦೨೬-೨೭ನೇ ಸಾಲಿನಲ್ಲಿ ಯುಕ್ತದಾರ ತಂತ್ರಾ0ಶದ ಮೂಲಕ ಯೋಜನೆಯನ್ನು ಸಿದ್ಧಪಡಿಸಲು, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಯುಕ್ತದಾರ ತಂತ್ರಾ0ಶ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಯುಕ್ತದಾರ ತಂತ್ರಾAಶವನ್ನು ಈಗಾಗಲೇ ಹಲವು ರಾಜ್ಯಗಳು ಅಳವಡಿಸಿಕೊಂಡು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರದ ಅನುದಾನ ಪೋಲಾಗದಂತೆ ನೋಡಿಕೊಳ್ಳುವ ಜೊತೆಗೆ ಕಾರ್ಯ ಪೂರ್ಣಗೊಳಿಸುವ ಸಾಮರ್ಥ್ಯಕ್ಕನುಗುಣವಾಗಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು.

ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ ಮಾತನಾಡಿ ಪಿಡಿಒ ಮತ್ತು ತಾಂತ್ರಿಕ ಸಿಬ್ಬಂದಿಗಳು ಇ-ಸಕ್ಷಮ ಮೂಲಕ ನೊಂದಣಿಯಾಗಿ ಯುಕ್ತದಾರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಸೂಚಿಸಿದರು. ಅಲ್ಲದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಕಾರ್ಮಿಕರ, ಜಾಬ್ ಕಾರ್ಡ್ ಹೊಂದಿದ, ಸಕ್ರಿಯ ಕಾರ್ಮಿಕ ಕುಟುಂಬಗಳ ಮೂರು ವರ್ಷಗಳ ಸರಾಸರಿ ಗಮನಿಸಿ ಮುಂದಿನ ಕಾಮಗಾರಿಗಳ ರೂಪುರೇಷೆ ತಯಾರಿಸುವಂತೆ ಆಯಾ ಗ್ರಾಮ ಸಭೆಗಳಲ್ಲಿ ಚರ್ಚಿಸಲು ತಿಳಿಸಿದರು.

ಯುಕ್ತದಾರ ತಂತ್ರಾ0ಶ ಕುರಿತು ಜಿಲ್ಲಾ ಪಂಚಾಯತಿ ನರೇಗಾ ಸಿಬ್ಬಂದಿಯಾದ ರಾಜೇಶ್ವರಿ ಗಡೇದ ಹಾಗೂ ಉಜ್ವಲ ಸಕ್ರಿ, ತಾಲೂಕ ಮಟ್ಟದ ನರೇಗಾ ಸಿಬ್ಬಂದಿಯಾದ ಬಾಹುಬಲಿ ಮುರಗುಂಡಿ ಹಾಗೂ ನವೀನ ಹಂಚಾಟೆ ತರಬೇತಿ ನೀಡಿದರು.

ತರಬೇತಿಯಲ್ಲಿ ಸಾಮಾಜಿಕ ಅರಣ್ಯ, ಪ್ರಾದೇಶಿಕ ಅರಣ್ಯ, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಂಚಾಯತ ರಾಜ್ ಇಲಾಖೆಯ ಜಿಲ್ಲಾ ಹಾಗೂ ತಾಲೂಕು, ಹೋಬಳಿ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಜಿಲ್ಲೆಯ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಂತ್ರಿಕ ಸಂಯೋಜಕರು ತಾಂತ್ರಿಕ ಸಹಾಯಕರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande