ತಿಮರೋಡಿ ಗಡಿಪಾರು ಆದೇಶಕ್ಕೆ ಉಚ್ಚ ನ್ಯಾಯಾಲಯ ತಡೆಯಾಜ್ಞೆ
ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಸಿ.ಎಂ. ಪೂನಚ್ಚರ ಏಕಸದಸ್ಯ ಪೀಠವು ಈ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದ
Timrodi


ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ನ್ಯಾಯಮೂರ್ತಿ ಸಿ.ಎಂ. ಪೂನಚ್ಚರ ಏಕಸದಸ್ಯ ಪೀಠವು ಈ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದ್ದು, ಸಂಬಂಧಿತ ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಲಾಗಿದೆ.

ತಿಮರೋಡಿ ರಾಜ್ಯ ಸರ್ಕಾರ, ಪುತ್ತೂರು ಎಸಿ, ಬಂಟ್ವಾಳ ಡಿವೈಎಸ್ಪಿ ಮತ್ತು ಬೆಳ್ತಂಗಡಿ ಇನ್ಸ್ಪೆಕ್ಟರ್ ವಿರುದ್ಧ ಅರ್ಜಿ ಸಲ್ಲಿಸಿ ಗಡಿಪಾರು ಆದೇಶ ರದ್ದುಪಡಿಸಲು ಮನವಿ ಮಾಡಿದ್ದರು.

ಸೆಪ್ಟೆಂಬರ್ 18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೆಪ್ಟೆಂಬರ್ 18, 2025 ರಿಂದ ಸೆಪ್ಟೆಂಬರ್ 17, 2026 ರವರೆಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande