ಬೆಳಗಾವಿಯ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಪರಿಶೀಲನೆ
ಬೆಳಗಾವಿ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 4ರಂದು ಬೆಳಗಾವಿಯ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅದರ ಅಂಗವಾಗಿ ಇಂದು ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಅಳವಡಿಸಲಾದ ಆಧುನಿಕ ವೈದ್ಯಕೀಯ ಉಪಕರಣಗಳನ್ನು ಜಿಲ್ಲಾ
Visit


ಬೆಳಗಾವಿ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 4ರಂದು ಬೆಳಗಾವಿಯ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅದರ ಅಂಗವಾಗಿ ಇಂದು ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಅಳವಡಿಸಲಾದ ಆಧುನಿಕ ವೈದ್ಯಕೀಯ ಉಪಕರಣಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಹಾಗೂ ಸುತ್ತಮುತ್ತಲಿನ ಜನತೆಗೆ ಗುಣಮಟ್ಟದ, ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆ ಒದಗಿಸಲು ಈ ಹೊಸ ಕಟ್ಟಡ ಮಹತ್ವದ ಹೆಜ್ಜೆಯಾಗಲಿದೆ ಸಚಿವ ಜಾರಕಿಹೊಳಿ‌ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಹಾಗೂ ಬಿಮ್ಸ್‌ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande