ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ : ಜಿಲ್ಲಾಧಿಕಾರಿ ನಿತೀಶ್ ಕೆ
ರಾಯಚೂರು, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಚರಿಸಲ್ಪಡುವ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ
ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆಯಾಗಲಿ: ಜಿಲ್ಲಾಧಿಕಾರಿ ನಿತೀಶ್ ಕೆ


ರಾಯಚೂರು, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಚರಿಸಲ್ಪಡುವ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಯಂತ್ಯುತ್ಸವ ನಿಮಿತ್ತ ಅಕ್ಟೋಬರ್ 7ರಂದು ನಗರದ ಸರ್ಕಾರಿ ಪದವಿ ಕಾಲೇಜ್ ಹತ್ತಿರದ ವಾಲ್ಮೀಕಿ ವೃತ್ತದಲ್ಲಿನ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಗಣ್ಯರಿಂದ ಪುಷ್ಪರ್ಚನೆ ನಡೆಯಲಿದ್ದು, ವಾಲ್ಮೀಕಿ ವೃತ್ತ ಸೇರದಂತೆ ನಗರದ ಎಲ್ಲಾ ಮಹನಿಯರ ವೃತ್ತಗಳನ್ನು ವಿದ್ಯುದ್ವೀಪಗಳಿಂದ ಅಲಂಕರಿಸಬೇಕು. ನಗರದ ಆಶಾಪೂರ ರಸ್ತೆಯ ವಾಲ್ಮೀಕಿ ಭವನದವರೆಗೆ ಮೆರವಣಿಗೆ ನಡೆಯಲಿದ್ದು, ಎಲ್ಲಾ ರಸ್ತೆಗಳಲ್ಲಿ ಶುಚಿತ್ವ ಇರುವಂತೆ ನೋಡಿಕೊಳ್ಳಬೇಕು.

ಮಹಿಳೆಯರಿಂದ ಕುಂಭ ಮೆರವಣಿಗೆ ಸಹಿತ ಮೆರವಣಿಗೆ ಸಾಗುವ ಮಾರ್ಗದಲ್ಲಿ ಸೂಕ್ತ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆಯಾಗಬೇಕು ಎಂದು ಜಿಲ್ಲಾ ಪೆÇಲೀಸ್ ಇಲಾಖೆಗೆ ಸೂಚನೆ ನೀಡಿದರು.

ಮೆರವಣಿಗೆಗೆ ಜಾನಪದ ಕಲಾ ತಂಡಗಳ ವ್ಯವಸ್ಥೆ ಮಾಡಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು.

ಆಮಂತ್ರಣ ಪತ್ರಿಕೆಗಳನ್ನು ಶಿಚ್ಟಾಚಾರದಂತೆ ಮುದ್ರಿಸಿ ಗಣ್ಯರಿಗೆ ತಲುಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖಂಡರಿಂದ ಸಲಹೆ: ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜೀವನ ಸಂದೇಶಗಳ ಬಗ್ಗೆ ಉಪನ್ಯಾಸ ಏರ್ಪಡಿಸಬೇಕು. ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಾಗಬೇಕು. ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪುಸ್ತಕ ಖರೀದಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಾಲ್ಮೀಕಿ ರಾಮಾಯಣದ ಬಗ್ಗೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮ ಆಯೋಜನ ಮಾಡಬೇಕು ಎಂದು ವಾಲ್ಮೀಕಿ ಸಮಾಜದ ಮುಖಂಡರು ಸಭೆಗೆ ಸಲಹೆ ಮಾಡಿದರು.

ಕುಡಿವ ನೀರು, ಇನ್ನೀತರ ಸೌಲಭ್ಯ ಕಲ್ಪಿಸಿ: ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಮೆರವಣಿಗೆಯಲ್ಲಿ ವಾಲ್ಮೀಕಿ ಸಮಾಜದ ಜನತೆ ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ. ಎಲ್ಲ ಜನತೆಗೆ ಜಿಲ್ಲಾಡಳಿತದಿಂದ ಕುಡಿಯುವ ನೀರು ಮತ್ತು ಇನ್ನಿತರ ವ್ಯವಸ್ಥೆ ಮಾಡಬೇಕು ಎಂದು ಸಮಾಜದ ಮುಖಂಡರು, ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ವಾಲ್ಮೀಕಿ ಭವನ ಸರಿಪಡಿಸಿ: ನಗರದ ವಾಲ್ಮೀಕಿ ಭವನವನ್ನು ದುರಸ್ತಿಗೊಳಿಸಬೇಕು ಎಂದು ಇದೆ ವೇಳೆ ಮುಖಂಡರು ಸಭೆಗೆ ಸಲಹೆ ಮಾಡಿದರು. ಮಹರ್ಷಿ ವಾಲ್ಮೀಕಿ ಭವನ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಭವನಗಳಿಗೆ ಪಿಓಪಿ, ಸೌಂಡ್ ಸಿಸ್ಟೆಂ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡುವುದಾಗಿ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿದರು.

ಸದ್ಯದಲ್ಲೇ ಬುಡಕಟ್ಟು ಉತ್ಸವ: ಜಿಲ್ಲೆಯಲ್ಲಿ ನವೆಂಬರ್ ಅಥವಾ ಡಿಸೆಂಬರ್ ಮಾಹೆಗಳಲ್ಲಿ ಎರಡು ದಿನಗಳ ಬುಡಕಟ್ಟು ಉತ್ಸವಕ್ಕೆ ಸಿದ್ಧತೆ ಮಾಡಲಾಗುತ್ತಿದ್ದು, ವಾಲ್ಮೀಕಿ ಸಮುದಾಯ ಸೇರಿದಂತೆ ಇನ್ನೀತರ ಸಮುದಾಯದ ಜನತೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಎಸ್ ಟಿ ವರ್ಗದ ಜನರು ಅರ್ಜಿ ಸಲ್ಲಿಸಲು ಮನವಿ: ರಾಯಚೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ, ಮನೆ ಇಲ್ಲದೇ ಗುಡಿಸಲು ಮತ್ತು ಇನ್ನೀತರ ಕಡೆ ವಾಸಿಸುವ ಅರ್ಹ ಎಸ್ ಸಿ ಹಾಗೂ ಎಸ್.ಟಿ ಸಮುದಾಯದ ಜನತೆಗೆ ಮಹಾನಗರ ಪಾಲಿಕೆಯಿಂದ ವಿಮಾನ ನಿಲ್ದಾಣದ ಹತ್ತಿರ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಇದರಲ್ಲಿ 1000 ಮನೆಗಳು ಪರಿಶಿಷ್ಟ ಪಂಗಡ ಎಸ್ ಟಿ ಜನತೆಗೆ ಮೀಸಲಿದ್ದು, ಇದುವರೆಗೆ ಕಡಿಮೆ ಸಂಖ್ಯೆಯಲ್ಲಿ ಅರ್ಜಿಗಳು ಬಂದಿವೆ. ಅರ್ಹ ಎಸ್ ಟಿ ಸಮುದಾಯದ ಫಲಾನುಭವಿಗಳು ಅರ್ಜಿ ಸಲ್ಲಿಸಿ ವಸತಿ ಯೋಜನೆಯ ಲಾಭ ಪಡೆಯಬೇಕು. ಈ ಬಗ್ಗೆ ವಾಲ್ಮೀಕಿ ಸಮಾಜದ ಮುಖಂಡರು ಕಡುಬಡ ಎಸ್ಟಿ ಜನತೆಗೆ ಈ ವಿಷಯ ತಿಳಿಸಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ, ಪ್ರೋಬೆÉಷನರಿ ಐಎಎಸ್ ಅಧಿಕಾರಿ ಪುರುರಾಜ್ ಸಿಂಗ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ವಾಲ್ಮೀಕಿ ಸಮಾಜದ ಮುಖಂಡರಾದ ಎನ್ ರಘುವೀರ ನಾಯಕ, ಗಿರಿಯಪ್ಪ ನಾಯಕ, ರಾಮು ನಾಯಕ, ಕರಿಯಪ್ಪ ನಾಯಕ, ನರೇಂದ್ರ ನಾಯಕ, ಭೀಮರಾಯ ವಕೀಲರು, ರವಿಕುಮಾರ ಅಸ್ಕಿಹಾಳ, ವೆಂಕಟೇಶ ಅಸ್ಕಿಹಾಳ ಹಾಗೂ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande