ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೀಗೆ ಹುಣ್ಣಿಮೆ ದಿನದಂದು ಅ.07 ರಂದು ಬೆಳಿಗ್ಗೆ 11 ಗಂಟೆಗೆ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 09 ಗಂಟೆಗೆ ವಾಲ್ಮೀಕಿ ಭವನದ ಆವರಣದಲ್ಲಿರುವ ಶ್ರೀ ವಾಲ್ಮೀಕಿ ಮಹರ್ಷಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ.
ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್