ಜಿಲ್ಲಾಡಳಿತದಿಂದ ಅ.2ರಂದು ಮಹಾತ್ಮ ಗಾಂಧಿ-ಲಾಲಬಹಾದ್ದೂರ ಶಾಸ್ತ್ರೀ ಜಯಂತಿ
ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಅ.2 ರಂದು ಮಹಾತ್ಮ ಗಾಂಧೀಜಿಯವರ ಹಾಗೂ ಲಾಲಬಹಾದ್ದೂರ ಶಾಸ್ತ್ರೀಜಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 7-15ಕ್ಕೆ ನಗರದ ಸೈನಿಕ ಶಾಲೆ ಹತ್ತಿರ ಇರುವ ಲಾಲಬಹಾದ್ದೂರ ಶಾಸ್ತ್ರೀಜಿಯವರ ಪುತ್ಥಳಿಗೆ
ಜಯಂತಿ


ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಅ.2 ರಂದು ಮಹಾತ್ಮ ಗಾಂಧೀಜಿಯವರ ಹಾಗೂ ಲಾಲಬಹಾದ್ದೂರ ಶಾಸ್ತ್ರೀಜಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 7-15ಕ್ಕೆ ನಗರದ ಸೈನಿಕ ಶಾಲೆ ಹತ್ತಿರ ಇರುವ ಲಾಲಬಹಾದ್ದೂರ ಶಾಸ್ತ್ರೀಜಿಯವರ ಪುತ್ಥಳಿಗೆ ಮಾಲಾರ್ಪಣೆ, ಬೆಳಿಗ್ಗೆ 7-30ಕ್ಕೆ ನಗರದ ಹೃದಯಭಾಗದ ಗಾಂಧಿವೃತ್ತದ ಪುತ್ಥಳಿಗೆ ಮಾಲಾರ್ಪಣೆ, ಬೆಳಿಗ್ಗೆ 8 ಗಂಟೆಗೆ ನಗರದ ಜಲನಗರ ರಸ್ತೆಯಲ್ಲಿರುವ ಬುದ್ಧ ವಿಹಾರದಿಂದ ಗಾಂಧಿ ಭವನದವರೆಗೆ ಸ್ವಚ್ಛತಾ ನಡಿಗೆ, ಬೆಳಿಗ್ಗೆ 8-45ಕ್ಕೆ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮ, ಬೆಳಿಗ್ಗೆ 9 ಗಂಟೆಗೆ ಗಾಂಧಿ ಭವನದಲ್ಲಿ ಕಾರ್ಯಕ್ರಮಗಳು ಜರುಗಲಿದ್ದು, 11 ಗಂಟೆಗೆ ಅಹಿಂಸಾ ಪ್ರತಿಜ್ಞೆ ಬೋಧನೆ ಕಾರ್ಯಕ್ರಮ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ಗಾಂಧೀಜಿ ಪ್ರಬಂಧ ಸ್ಪರ್ಧೆ ವಿಜೇತರು : ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮಾಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶೃತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಒಟ್ಟು 579 ಶಾಲೆಗಳಿಂದ 8198 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ನಗರದ ಜಲನಗರ ಸರ್ಕಾರಿ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ಅನ್ನಪೂರ್ಣ ಬ.ಪೂಜಾರಿ ಪ್ರಥಮ, ಇಂಡಿ ತಾಲೂಕಿನ ನಾದ ಕೆ.ಡಿ.ಯ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಸೃಷ್ಟಿ ಹಳೇಮನಿ ದ್ವೀತಿಯ ಸ್ಥಾನ ಹಾಗೂ ಸಿಂದಗಿ ತಾಲೂಕಿನ ಕೆರೂಟರಗಿ ಆರ್.ಎಂ.ಎಸ್.ಎ. ಪ್ರೌಢಶಾಲೆ ವಿದ್ಯಾರ್ಥಿನಿ ಶ್ರೇಯಾ ಮ.ಪಾಟೀಲ ತೃತೀಯ ಸ್ಥಾನ ಪಡೆದಿದ್ದಾರೆ.

ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜ್‍ನ ಗೌರಿ ಮ.ತೆಲಗಿ ಪ್ರಥಮ, ವಿಜಯಪುರ ನಗರದ ಬಾಲಕಿಯರ ಸರಕಾರಿ ಪೂರ್ವ ಕಾಲೇಜ್‍ನ ಲಕ್ಷ್ಮೀ ಎಂ.ಮಾಳೆ ದ್ವೀತಿಯ ಹಾಗೂ ವಿಜಯಪುರ ಸಿಕ್ಯಾಬ ಮಹಿಳಾ ಪದವಿಪೂರ್ವ ಕಾಲೇಜ್‍ನ ಚೇತನಾ ಬಿ.ಬಗಲಿ ಮತ್ತು ಬಬಲೇಶ್ವರ ತಾಲೂಕಿನ ಅರ್ಜುಣಗಿ ಸರಕಾರಿ ಪದವಿಪೂರ್ವ ಕಾಲೇಜ್‍ನ ಮೇಘಾ ಕೊಟ್ಯಾಳ ತೃತೀಯ ಸ್ಥಾನ ಪಡೆದಿದ್ದಾರೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜಯಪುರ ಸರಕಾರಿ ಪ್ರಥಮ ದರ್ಜೆ ಕಾಲೇಜ್‍ನ ವಿದ್ಯಾರ್ಥಿನಿ ಐಶ್ವರ್ಯ ರಜಪೂತ ಪ್ರಥಮ, ಝಳಕಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‍ನ ಸೌಮ್ಯ ಎಸ್.ಬಿರಾದಾರ ದ್ವೀತಿಯ ಹಾಗೂ ದೇವರಹಿಪ್ಪರಗಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‍ನ ರಾಧಿಕಾ ಧರ್ಮಸೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande