ಮೋಕ : “ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ”
ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗರ್ಭಿಣಿ ಮಹಿಳೆಯರು, ತಾಯಂದಿರು ತಮ್ಮ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೆಶ್ ಬಾಬು ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂ
ಮೋಕ: “ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ”


ಮೋಕ: “ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ”


ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗರ್ಭಿಣಿ ಮಹಿಳೆಯರು, ತಾಯಂದಿರು ತಮ್ಮ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೆಶ್ ಬಾಬು ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ “ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ” ಮತ್ತು ಎಂಟನೇ ಪೆÇೀಶನ್ ಮಾಸಾಚರಣೆ ಅಂಗವಾಗಿ ಬಳ್ಳಾರಿ ತಾಲ್ಲೂಕಿನ ಮೋಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗರ್ಭಿಣಿ ಮಹಿಳೆಯರು, ತಾಯಂದಿರು ವೈದ್ಯರ ಹತ್ತಿರ ನಿಯಮಿತ ಆರೋಗ್ಯ ತಪಾಸಣೆ ಮತ್ತು ಮಕ್ಕಳಿಗೆ ನಿಗಧಿತ ವೇಳೆಯಲ್ಲಿ ಲಸಿಕೆ ಹಾಕಿಸಬೇಕು. ಹದಿಹರೆಯದ ಹೆಣ್ಣುಮಕ್ಕಳು ಸಕಾಲದಲ್ಲಿ ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ನಿರ್ದಿಷ್ಟ ಆರೋಗ್ಯ, ಪೌಷ್ಟಿಕಾಂಶದ ಅಗತ್ಯತೆ ಪೂರೈಸಲು ಆಯುμÁ್ಮನ್ ಆರೋಗ್ಯ ಮಂದಿರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 3ನೇ ಶನಿವಾರ ನಡೆಯುವ ಗ್ರಾಮ ಆರೋಗ್ಯ ಪೌಷ್ಟಿಕ ದಿನಾಚರಣೆಯಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸಿಗುವ ತರಕಾರಿಗಳಿಂದ ತಯಾರಿಸಬಹುದಾದ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿತೆ ಮಾಡಿ ತಾಯಂದಿರಿಗೆ ತಿಳಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಮೋಕ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಭಾರತಿ, ಪ್ರಸೂತಿ ತಜ್ಞ ವೈದ್ಯೆ ಡಾ.ವಿಜಯಲಕ್ಷ್ಮಿ, ಎನ್.ಸಿ.ಡಿ ವೈದ್ಯೆ ಡಾ. ಸಿಂಧು, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಕಚೇರಿ ಅಧೀಕ್ಷಕ ವೆಂಕಟಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ.ವಿ ಸೇರಿದಂತೆ ವಿವಿಧ ವೃಂದ ಅಧಿಕಾರಿ ಸಿಬ್ಬಂದಿ ವರ್ಗದವರು, ಆಶಾಕಾರ್ಯಕರ್ತೆಯರು, ತಾಯಂದಿರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande