ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ಭಾಗಿ
ನವದೆಹಲಿ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಶೇಷ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಅಕ್ಟೋಬರ್ 1 ರಂದು ಬೆಳಿಗ್ಗ
Pm


ನವದೆಹಲಿ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಶೇಷ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ಅಕ್ಟೋಬರ್ 1 ರಂದು ಬೆಳಿಗ್ಗೆ 10:30 ಕ್ಕೆ ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದೆ.

ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರು 1925 ರ ವಿಜಯದಶಮಿಯಂದು ನಾಗ್ಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಸ್ಥಾಪಿಸಿದರು. ಸಂಘ ಸ್ಥಾಪನೆಯಾಗಿ ನೂರು ವರ್ಷ ಪೊರೈಸಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸಂಘ ಶತಮಾನೋತ್ಸವ ಸಮಾರಂಭ ಆಚರಿಸುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande