ರಟ್ಟಿಹಳ್ಳಿ ಪಟ್ಟಣ ಪಂಚಾಯತಿ ಬಿಜೆಪಿ ಮಡಿಲಿಗೆ
ವಿರೂಪಾಕ್ಷಪ್ಪ
Election


ಹಾವೇರಿ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ಬೆಂಬಲಿತ ರವೀಂದ್ರ ಮುದಿಯಪ್ಪನವರ ಹಾಗೂ ಉಪಾಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ಶಿವಕುಮಾರ ಉಪ್ಪಾರ ಆಯ್ಕೆಯಾದರು.

ಈ ಸಂಂದರ್ದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮತದಾನದಲ್ಲಿ ಭಾಗವಹಿಸಿ, ಅಧ್ಯಕ್ಷ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

ಚುನಾವಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಮಾನಸದಲ್ಲಿ ಬಿಜೆಪಿಗೆ ನೆಲೆ ಇದೆ. ಕಾಂಗ್ರೆಸ್ ನಿಂದ ಆಯ್ಕೆಯಾದವರೂ ಕೂಡ ನಮ್ಮ ಪಕ್ಷದಿಂದ ಹೋದವರೆ. ಅವರನ್ನು ಮುಖ್ಯಮಂತ್ರಿ ಬಳಿ ಕರೆದುಕೊಂಡು ಹೋಗಿದ್ದರು. ಆದರೆ, ಅವರು ಅಸಮಾಧಾನಗೊಂಡು ನಮ್ಮ ಪಕ್ಷವನ್ನು ಸೇರಿದ್ದಾರೆ. ನೈಜವಾಗಿ ಅಧ್ಯಕ್ಷ ಸ್ಥಾನ ಬಿಜೆಪಿಯವರಿಗೆ ಸಿಗಬೇಕಿತ್ತು. ರವೀಂದ್ರ ಮುದಿಯಪ್ಪನವರ ತೀರ್ಮಾನದಿಂದ ಸಿಕ್ಕಿದೆ. ಅವರಿಗೂ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶಿವಕುಮಾರ ಉಪ್ಪಾರ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಬಿ.ಸಿ ಪಾಟೀಲ ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ವಿರೂಪಾಕ್ಷಪ್ಪ ಬಳ್ಳಾರಿ ಸೇರಿದಂತೆ ಪಟ್ಟಣ ಪಂಚಾಯತಿಯ ಸದಸ್ಯರು ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande