ಬೀದರ್ - ಬೆಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು
ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಒದಗಿಸಲಿದೆ. ರೈಲು ಸಂಖ್ಯೆ 07063 ಬೀದರ್ – ಬೆಂಗಳೂರು ಕಂಟೋನ್ಮೆ
ಬೀದರ್ - ಬೆಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು


ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಒದಗಿಸಲಿದೆ.

ರೈಲು ಸಂಖ್ಯೆ 07063 ಬೀದರ್ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು 2025ರ ಅಕ್ಟೋಬರ್ 4ರಂದು ಬೀದರ್ ನಿಂದ ಮಧ್ಯಾಹ್ನ 2:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5:00ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07064 ಬೆಂಗಳೂರು ಕಂಟೋನ್ಮೆಂಟ್ – ಬೀದರ್ ವಿಶೇಷ ಎಕ್ಸ್‌ಪ್ರೆಸ್ ರೈಲು 2025ರ ಅಕ್ಟೋಬರ್ 5ರಂದು ರಾತ್ರಿ 10:30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಂದ ಹೊರಟು, ಮರುದಿನ ಮಧ್ಯಾಹ್ನ 2:40ಕ್ಕೆ ಬೀದರ್ ತಲುಪಲಿದೆ.

ಮಾರ್ಗಮಧ್ಯೆ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಕಮಲಾಪುರ ಮತ್ತು ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಕಲ್ಪಿಸಲಾಗಿದೆ.

ಈ ವಿಶೇಷ ರೈಲು 24 ಬೋಗಿಗಳ ಸಂಯೋಜನೆಯೊಂದಿಗೆ ಓಡಲಿದೆ. ಇದರಲ್ಲಿ 1 ಎಸಿ ಟು ಟಯರ್, 2 ಎಸಿ ತ್ರಿ ಟಯರ್, 17 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು, 2 ಸಾಮಾನ್ಯ ಬೋಗಿಗಳು ಹಾಗೂ 2 ಲಗೇಜ್ ಕಮ್ ದಿವ್ಯಾಂಗ ಸ್ನೇಹಿ ಬೋಗಿಗಳು ಇರಲಿವೆ ಎಂದು ನೈಋತ್ಯ ರೇಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande