ಸಮೀಕ್ಷೆ ಕಾರ್ಯಕ್ಕೆ ವೇಗ ನೀಡಿ : ಜಿಲ್ಲಾಧಿಕಾರಿ
ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯದಲ್ಲಿ ಈವರೆಗೆ ಶೇ.38 ರಷ್ಟು ಪ್ರಗತಿಯಾಗಿದ್ದು, ರಾಜ್ಯದ ಕ್ರಮಾಂಕದಲ್ಲಿ 15 ನೇ ಸ್ಥಾನದಲ್ಲಿದ್ದೇವೆ. ಇನ್ನೂ ಸಮೀಕ್ಷಾ ಕಾರ್ಯಕ್ಕೆ ವೇಗ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವ
ಸಮೀಕ್ಷೆ ಕಾರ್ಯಕ್ಕೆ ವೇಗ ನೀಡಿ : ಜಿಲ್ಲಾಧಿಕಾರಿ


ಸಮೀಕ್ಷೆ ಕಾರ್ಯಕ್ಕೆ ವೇಗ ನೀಡಿ : ಜಿಲ್ಲಾಧಿಕಾರಿ


ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯದಲ್ಲಿ ಈವರೆಗೆ ಶೇ.38 ರಷ್ಟು ಪ್ರಗತಿಯಾಗಿದ್ದು, ರಾಜ್ಯದ ಕ್ರಮಾಂಕದಲ್ಲಿ 15 ನೇ ಸ್ಥಾನದಲ್ಲಿದ್ದೇವೆ. ಇನ್ನೂ ಸಮೀಕ್ಷಾ ಕಾರ್ಯಕ್ಕೆ ವೇಗ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಸಮೀಕ್ಷೆಯ ನೋಡಲ್ ಅಧಿಕಾರಿಗಳು, ವರ್ಚುವಲ್ ಮೂಲಕ ಸಂಡೂರು ತಾಲ್ಲೂಕು ತಹಶೀಲ್ದಾರರೊಂದಿಗೆ ಸಮೀಕ್ಷೆಯ ಪ್ರಗತಿ ಸಭೆ ನಡೆಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯ ಆರಂಭಗೊಂಡು 08 ದಿನಗಳಾಗಿವೆ. ಇನ್ನುಳಿದ ದಿನಗಳಲ್ಲಿ ನಿಗದಿತ ಗುರಿ ತಲುಪಲು ಮತ್ತು ಜಿಲ್ಲೆಯನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರಿಸಲು ಸೂಕ್ತ ತಾಂತ್ರಿಕ ಯೋಜನೆ ರೂಪಿಸಿ ಗಣತಿದಾರರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಒಟ್ಟು 171 ಗಣತಿದಾರರಿದ್ದು, ಅದರಲ್ಲಿ ಕೇವಲ 36 ಗಣತಿದಾರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಉಳಿದವರು ಸ್ಪಂದಿಸುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ಅಂತಹವರನ್ನು ಗುರುತಿಸಿ ಅಮಾನತಿಗೆ ಶಿಫಾರಸು ಮಾಡಬೇಕು ಎಂದರು.

ತಾಲ್ಲೂಕುವಾರು ಪ್ರಗತಿ

ಬಳ್ಳಾರಿ ತಾಲ್ಲೂಕು: 1.75 ಲಕ್ಷ ಮನೆಗಳ ಪೈಕಿ 53 ಸಾವಿರ ಮನೆ ಪೂರ್ಣ.

ಕಂಪ್ಲಿ: 33 ಸಾವಿರ ಮನೆಗಳ ಪೈಕಿ 16 ಸಾವಿರ ಮನೆ ಪೂರ್ಣ.

ಕುರುಗೋಡು: 27 ಸಾವಿರ ಮನೆಗಳ ಪೈಕಿ 15 ಸಾವಿರ ಮನೆ ಪೂರ್ಣ.

ಸಂಡೂರು: 79 ಸಾವಿರ ಮನೆಗಳ ಪೈಕಿ 27 ಸಾವಿರ ಮನೆ ಪೂರ್ಣ.

ಸಿರುಗುಪ್ಪ: 65 ಸಾವಿರ ಮನೆಗಳ ಪೈಕಿ 35 ಸಾವಿರ ಮನೆ ಪೂರ್ಣ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande