ವಿಜಯ್ ಕುಮಾರ್ ಮಲ್ಹೋತ್ರಾ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ವಿಜಯ್ ಮಲ್ಹೋತ್ರಾ ಅವರು ಇಂದು ಬೆಳಿಗ್ಗೆ ತಮ್ಮ 94 ನೇ ವಯಸ್ಸಿನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್‌ನಲ್ಲಿ ನಿಧನರಾದರು. ಪ್ರಧಾನಿ ನರೇಂದ್ರ ಮೋದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ವಿಜಯ್ ಕು
Pm condolences


ನವದೆಹಲಿ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ವಿಜಯ್ ಮಲ್ಹೋತ್ರಾ ಅವರು ಇಂದು ಬೆಳಿಗ್ಗೆ ತಮ್ಮ 94 ನೇ ವಯಸ್ಸಿನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್‌ನಲ್ಲಿ ನಿಧನರಾದರು. ಪ್ರಧಾನಿ ನರೇಂದ್ರ ಮೋದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ವಿಜಯ್ ಕುಮಾರ್ ಮಲ್ಹೋತ್ರಾ ಅವರು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿದ್ದ ಅತ್ಯುತ್ತಮ ನಾಯಕರಾಗಿದ್ದರು. ದೆಹಲಿಯಲ್ಲಿ ನಮ್ಮ ಪಕ್ಷವನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಂಸದೀಯ ವಿಷಯಗಳಲ್ಲಿ ಅವರು ನೀಡಿದ ಮಾರ್ಗದರ್ಶನ ಸ್ಮರಿಸಲಾಗುತ್ತದೆ. ಅವರ ನಿಧನದಿಂದ ನನಗೆ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ. ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ಬರೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande