ವಿಜಯಪುರ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗಾಗಿ ಕೆಳದಿ ಚನ್ನಮ್ಮ ಪ್ರಶಸ್ತಿಗಾಗಿ ನಾವೀನ್ಯತೆ,ತಾರ್ಕಿಕ ಸಾಧನೆಗಳು,ಕ್ರೀಡೆ,ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ಕ್ಷೇತ್ರದಿಂದ ಇಬ್ಬರು ಮಕ್ಕಳಂತೆ ಎಂಟು ಮಕ್ಕಳನ್ನು ಆಯ್ಕೆ ಮಾಡಲಾಗುವುದು.ಈ ಪ್ರಶಸ್ತಿಯು ತಲಾ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿದ್ದು, 5 ರಿಂದ 18 ವರ್ಷದೊಳಗಿನ ಮಕ್ಕಳು ಅಗತ್ಯ ದಾಖಲೆ ಸಹಿತ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande