ಪಾಟ್ನಾ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರದ ಪಾಟ್ನಾದ ಸಿಪಾರಾ–ಪನ್‌ಪುನ್ ರಸ್ತೆಯ ಪರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗದಲ್ಲಿ ಚಲಿಸುತ್ತಿದ್ದ ಗ್ರ್ಯಾಂಡ್ ವಿಟಾರಾ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಛಿದ್ರವಾಗಿದೆ
ಮೃತರಲ್ಲಿ ರಾಜೇಶ್ ಕುಮಾರ್ (50), ಸಂಜಯ್ ಕುಮಾರ್ ಸಿನ್ಹಾ (55), ಕಮಲ್ ಕಿಶೋರ್ (38), ಪ್ರಕಾಶ್ ಚೌರಾಸಿಯಾ (35) ಮತ್ತು ಸುನಿಲ್ ಕುಮಾರ್ (38) ಸೇರಿದ್ದಾರೆ. ಎಲ್ಲರೂ ಪಾಟ್ನಾ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ವ್ಯಾಪಾರ ನಡೆಸುತ್ತಿದ್ದರು.
ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಶವಗಳನ್ನು ಹೊರತೆಗೆದು ಪಿಎಂಸಿಎಚ್ ಆಸ್ಪತ್ರೆಗೆ ಕಳುಹಿಸಿದರು. ಪ್ರಾಥಮಿಕ ತನಿಖೆಯ ಪ್ರಕಾರ, ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದು, ಟ್ರಕ್ ನಿಧಾನಗತಿಯಲ್ಲಿ ಅಥವಾ ಪಕ್ಕದಲ್ಲಿ ನಿಲ್ಲಿಸಿರಬಹುದು ಎಂದು ಶಂಕಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa