ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ ಜಿಲ್ಲಾ ಪ್ರವಾಸ
ವಿಜಯಪುರ, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ 6ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು, ಆಲಮಟ್ಟಿಯಲ್ಲಿನ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಶನಿವಾರ 6ರ ಮಧ್ಯಾ
ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ ಜಿಲ್ಲಾ ಪ್ರವಾಸ


ವಿಜಯಪುರ, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ 6ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು, ಆಲಮಟ್ಟಿಯಲ್ಲಿನ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಶನಿವಾರ 6ರ ಮಧ್ಯಾಹ್ನ 12ಗಂಟೆಗೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸುವ ಅವರು,ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ನೆರವೇರಿಸಿ, ಅದೇ ದಿನ ಮಧ್ಯಾಹ್ನ 3ಗಂಟೆಗೆ ಕೊಪ್ಪಳ ಜಿಲ್ಲೆಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande