ಮೋದಿ ತಾಯಿ ಬಗ್ಗೆ ಅವಾಚ್ಯ ಪದ ಬಳಕೆ ; ರಾಹುಲ್ ಕ್ಷಮೆಯಾಚನೆಗೆ ಒತ್ತಾಯ
ಮೋದಿ ತಾಯಿ ಬಗ್ಗೆ ಅವಾಚ್ಯ ಪದ ಬಳಕೆ ; ರಾಹುಲ್ ಕ್ಷಮೆಯಾಚನೆಗೆ ಒತ್ತಾಯ
ಚಿತ್ರ ;ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಓಂ ಶಕ್ತಿ ಚಲಪತಿ.


ಕೋಲಾರ, 0೪ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಬಿಹಾರದ ದರ್ಭಾಂಗ್ದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿದ ರಾಹುಲ್ ಗಾಂಧಿ ಕೂಡಲೇ ಕ್ಷಮೆಯಾಚಿಸಬೇಕೆಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಓಂ ಶಕ್ತಿ ಚಲಪತಿ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ದರ್ಭಾಂಗಾದಲ್ಲಿ ನಡೆದ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಯಾತ್ರೆಯ ವೇದಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ದಿವಂಗತ ತಾಯಿಯ ವಿರುದ್ಧ ಅತ್ಯಂತ ಅಸಭ್ಯ ಭಾಷೆಯನ್ನು ಬಳಸಿದ್ದಾರೆ. ಇದನ್ನು ಪುನರಾವರ್ತಿಸಲು ಸಹ ಸಾಧ್ಯವಿಲ್ಲ.ಅಲ್ಲದೆ ರಾಜಕೀಯದಲ್ಲಿ ಇಂತಹ ದುಷ್ಕೃತ್ಯವನ್ನು ಹಿಂದೆಂದೂ ನೋಡಿರಲಿಲ್ಲ. ಈ ಯಾತ್ರೆಯೂ ಅವಮಾನ, ದ್ವೇಷ ಮತ್ತು ಅಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮೋದಿಯವರ ದಿವಂಗತ ತಾಯಿ ಬಗ್ಗೆ ಬಳಸಿರುವ ಅವಾಚ್ಯ ಪದಗಳು ವಿರೋಧಪಕ್ಷಗಳ ಹತಾಶ ಸ್ಥಿತಿಯನ್ನು ತೋರಿಸುತ್ತದೆ. ಎಷ್ಟೇ ಬಾರಿ ಕ್ಷಮೆ ಕೇಳಿದರೂ ಜನರು ವಿಪಕ್ಷಗಳನ್ನು ಕ್ಷಮಿಸುವುದಿಲ್ಲ. ಕಾಂಗ್ರೆಸ್ನ ಈ ಯಾತ್ರೆಯು ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಲೆಂದೇ ಹಮ್ಮಿಕೊಳ್ಳಲಾಗಿದೆ ಎಂದು ಆರೋಪಿಸಿದರು.

ದೇಶದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ನಿರಂತರವಾಗಿ ಅವಹೇಳನ ಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ವೇದಿಕೆ ಮೇಲೆ ಪ್ರಧಾನಿ ಮೋದಿ ಅವರ ತಾಯಿಯ ವಿರುದ್ಧ ಆಕ್ಷೇಪಾರ್ಹ ಪದಗ ಳನ್ನು ಬಳಸಿದ್ದಾರೆ. ದಿವಂಗತ ತಾಯಿಯ ಬಗ್ಗೆ ಈ ರೀತಿ ಮಾತನಾಡಿರುವುದು ರಾಹುಲ್ ಗಾಂಧಿಯ ವ್ಯಕ್ತಿತ್ವ ತೋರಿಸುತ್ತಿದೆ ಎಂದು ಕಿಡಿಕಾರಿದರು.

ಕಲ್ಲು ಕ್ವಾರಿ ದುರಂತ ಕ್ರಮಕ್ಕೆ ಚಲಪತಿ ಆಗ್ರಹ ; ಮಾಲೂರು ತಾಲ್ಲೂಕಿನ ಟೇಕಲ್ ಬಳಿಯ ಹುಣಸೀಕೋಟೆ ಪಟಾಲಮ್ಮ ದೇವಸ್ಥಾನದ ಹಿಂಭಾ ಗದ ಕಲ್ಲು ಕ್ವಾರಿಯಲ್ಲಿ ನಡೆದ ದುರಂತ ದಲ್ಲಿ ಓರ್ವ ಕಾರ್ಮಿಕ ಬಂಡೆಯ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದು ಮತ್ತೊಬ್ಬರು ಗಂಭೀರ ವಾಗಿ ಗಾಯಗೊಂಡಿರುವ ಘಟನೆ ಜಿಲ್ಲಾಡಳಿತ ಹಾಗೂ ಗಣಿ ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಘಟ ಕದ ಅಧ್ಯಕ್ಷ ಓಂ ಶಕ್ತಿ ಚಲಪತಿ ಆರೋಪಿಸಿದರು.

ಈ ಘಟನೆಯು ಕಲ್ಲು ಕ್ವಾರಿಗಳಲ್ಲಿ ಕಾರ್ಮಿ ಕರ ಸುರಕ್ಷತೆಯನ್ನು ಹೇಗೆ ನಿರ್ಲಕ್ಷಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಇಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಲ್ಲದೆ, ಆಂಧ್ರ ಮತ್ತು ತಮಿಳುನಾಡಿನಿಂದ ಬಂದ ಕಾರ್ಮಿಕರಿಗೂ ಯಾವುದೇ ಸುರಕ್ಷತಾ ಸಾಧನಗಳಿಲ್ಲ. ಇದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ಕಾರ್ಮಿಕರಿಗೆ ಹೆಲ್ಮೆಟ್, ಕೈಗವಸುಗಳು, ಸುರಕ್ಷತಾ ಬೆಲ್ಟ್, ಕಲ್ಲಿನ ಚೂರುಗಳಿಂದ ರಕ್ಷಣೆ ನೀಡುವ ಕನ್ನಡಕಗಳಂತಹ ಭದ್ರತಾ ಉಪಕರಣಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಸ್ಫೋಟಕಗಳನ್ನು ಬಳಸಿ ಕಲ್ಲುಗಳನ್ನು ಸಿಡಿಸುವಾಗ, ಪರವಾನಿಗೆ ಪಡೆದ ಮತ್ತು ತರಬೇತಿ ಪಡೆದ ವ್ಯಕ್ತಿಯಿಂದ ಮಾತ್ರ ಈ ಕಾರ್ಯನಿರ್ವಹಿಸಬೇಕು. ಸ್ಪೋಟಕಗಳನ್ನು ನಿಗದಿತ ಮಾನದಂಡಗಳ ಪ್ರಕಾರ ಸಂಗ್ರಹಿಸಿ ಬಳಸಬೇಕು. ಆದರೆ, ಇಲಾಖೆಯ ಅಧಿಕಾರಿಗಳು ಮಾಲೀಕರೊಂದಿಗೆ ಶಾಮೀಲಾಗಿ ಈ ನಿಯಮಗಳನ್ನು ಪಾಲಿಸುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ದುರಂತದಲ್ಲಿ ಮರಣ ಹೊಂದಿದ ಹಾಗೂ ಗಾಯಗೊಂಡ ಕಾರ್ಮಿಕ ಕುಟುಂಬಕ್ಕೆ ಪರಿಹಾರ ನೀಡಬೇಕು. ಈ ದುರ್ಘಟನೆಗಳು ಪದೇ ಪದೇ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಗಣಿ ಇಲಾಖೆ ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನ ಹರಿಸಿ, ಕ್ವಾರಿ ಮಾಲೀಕರಿಗೆ ಎಚ್ಚರಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಚಿತ್ರ ; ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಓಂ ಶಕ್ತಿ ಚಲಪತಿ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande