ಗದಗ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ದೇಶದ ಜನತೆಗೆ ಕೇಂದ್ರ ಸರ್ಕಾರ ನವರಾತ್ರಿ ಉಡುಗೊರೆ ನೀಡಿದೆ. ಮಧ್ಯಮ ವರ್ಗಕ್ಕೆ ಆರ್ಥಿಕ ನಿರಾಳತೆ ಒದಗಿಸುವ ಮಹತ್ವಾಕಾಂಕ್ಷೆಯಿಂದ ಜಿಎಸ್‍ಟಿ ವ್ಯವಸ್ಥೆಯನ್ನು ಸರಳೀಕರಣಗೊಳಿಸದ ಕೇಂದ್ರ ಸರ್ಕಾರದ ನಡೆ ವ್ಯಾಪಾರಸ್ತರಿಗೆ, ಮಧ್ಯಮವರ್ಗದವರಿಗೆ ನೀಡಿದ ಕೊಡಿಗೆಯಾಗಿದೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವರಿಂದು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ ಪ್ರಧಾನಿ ನರೇಂದ್ರ ಮೋದಿರವರು ದೀಪಾವಳಿಗೆ ಜಿಎಸ್‍ಟಿ ಗಿಫ್ಟ್ ನೀಡುವುದಾಗಿ ಘೋಷಿಸಿದ್ದರೂ ಬುಧವಾರ ಆರಂಭಗೊಂಡ 2 ದಿನಗಳ ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಹಾಲಿ ಇದ್ದ 4 ಸ್ಲ್ಯಾಬ್‍ಗಳನ್ನು 2ಕ್ಕೆ ಇಳಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಅದರನ್ವಯ ಶೇ 5, ಶೇ 8 ಸ್ಲ್ಯಾಬ್ ಮಾತ್ರ ಉಳಿದುಕೊಳ್ಳಲಿದೆ. ಜೀವವಿಮೆ, ಆರೋಗ್ಯ ವಿಮೆಯನ್ನು ಶೂನ್ಯ ತೆರಿಗೆ ವ್ಯಾಪ್ತಿಗೆ ತರುವ ಮೂಲಕ ಕೋಟ್ಯಾಂತರ ಜನರಿಗೆ ಅನುಕೂಲ ಮಾಡಿಕೊಡಲಾಗಿದೆ ಹೊಸ ತೆರಿಗೆ ಪದ್ಧತಿ ಸೆ. 22 ರಿಂದಲೇ ದೇಶದಲ್ಲಿ ಅನುಷ್ಠಾನಗೊಳ್ಳಲಿದೆ. ಹಾಗು ವ್ಯಾಪಕವಾದ ಸುಧಾರಣೆಗಳು ನಮ್ಮ ನಾಗರಿಕರ ಜೀವನವನ್ನು ಸುಧಾರಿಸುತ್ತದೆ ಮತ್ತು ಎಲ್ಲರಿಗೂ ವಿಶೇಷವಾಗಿ ಸಣ್ಣ ವ್ಯಾಪಾರಿಗಳು ಮತ್ತು ಉದ್ಯಮಗಳಿಗೆ ವ್ಯಾಪರ ಮಾಡುವ ಸುಲಭತೆಯನ್ನು ಖಚಿತಪಡಿಸುತ್ತದೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ರಾಜು ಕುರುಡಗಿ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP