ನವದೆಹಲಿ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಎಸ್‌ಟಿ ಕೌನ್ಸಿಲ್‌ನ 56ನೇ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಧಾರಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸ್ವಾಗತಿಸಿದ್ದಾರೆ.
ಶೇ.12 ಮತ್ತು ಶೇ.28 ರ ತೆರಿಗೆ ಸ್ಲ್ಯಾಬ್‌ಗಳನ್ನು ರದ್ದು ಮಾಡಿ, ಶೇ.5 ಮತ್ತು ಶೇ.18 ರ ಎರಡು ಸ್ಲ್ಯಾಬ್‌ಗಳನ್ನು ಮಾತ್ರ ಉಳಿಸಿರುವುದರಿಂದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಪರಿಹಾರ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.
ಗುರುವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿಪ್ರಾಯ ಹಂಚಿಕೊಂಡ ನಡ್ಡಾ, “ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಿಎಸ್‌ಟಿ ಸುಧಾರಣೆಗಳು ಜನಕೇಂದ್ರಿತವಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ವಿಶೇಷವಾಗಿ ಸಕಾರಾತ್ಮಕವಾಗಿದೆ. ಔಷಧಗಳು, ವೈದ್ಯಕೀಯ ಸಾಧನಗಳು ಹಾಗೂ ರೋಗನಿರ್ಣಯ ಸೇವೆಗಳ ಮೇಲಿನ ತೆರಿಗೆ ಕಡಿಮೆಯಾಗಿದ್ದು, ಕನ್ನಡಕಗಳ ಬೆಲೆ ಅಗ್ಗವಾಗಿದೆ. ಇದು ಆರೋಗ್ಯ ಕ್ಷೇತ್ರಕ್ಕೆ ಸರ್ಕಾರದ ಆದ್ಯತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಹೇಳಿದರು.
ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ನಿರಂತರ ಅಭಿವೃದ್ಧಿ ಮತ್ತು ಪ್ರಗತಿಯನ್ನು ವೇಗಗೊಳಿಸಲು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ಘೋಷಿಸಿದೆ. ಅಗತ್ಯ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ ಜನಜೀವನ ಸುಲಭಗೊಳಿಸುವುದರ ಜೊತೆಗೆ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಿದೆ. ಈ ಸುಧಾರಣೆ ವ್ಯಾಪಾರ ಮಾಡುವ ಸುಲಭತೆಯನ್ನು ಹೆಚ್ಚಿಸಿ, ಸಣ್ಣ ವ್ಯವಹಾರಗಳನ್ನು ಬಲಪಡಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa