ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ : ಬಸವರಾಜ ಬೊಮ್ಮಾಯಿ
ಬೆಂಗಳೂರು, 4 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಎಸ್ ಟಿ ಸರಳೀಕರಣ ಬಡವರ ಪರ, ಸಾಮಾನ್ಯ ಜನರ ಪರ ಗ್ರಾಹಕ ಸ್ನೇಹಿ ತೀರ್ಮಾನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು ಇದರಿಂದ ವ್ಯಾಪಾರ ವಹಿ
ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ : ಬಸವರಾಜ ಬೊಮ್ಮಾಯಿ


ಬೆಂಗಳೂರು, 4 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಎಸ್ ಟಿ ಸರಳೀಕರಣ ಬಡವರ ಪರ, ಸಾಮಾನ್ಯ ಜನರ ಪರ ಗ್ರಾಹಕ ಸ್ನೇಹಿ ತೀರ್ಮಾನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು ಇದರಿಂದ ವ್ಯಾಪಾರ ವಹಿವಾಟು ಹೆಚ್ಚಳವಾಗಲಿದ್ದು ದೇಶದ ಆರ್ಥಿಕತೆಯನ್ನು ಬಲಗೊಳಿಸುತ್ತದೆ. ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೆಗೆದುಕೊಂಡಿರುವ ಅತ್ಯಂತ ದಿಟ್ಟ ನಿರ್ಧಾರವಾಗಿದೆ. ಅವರ ಕನಸಿನ ಆತ್ಮನಿರ್ಭರ ಹಾಗೂ ವಿಕಸಿತ ಭಾರತ ನಿರ್ಮಾಣಕ್ಕೆ ಇದು ಪೂರಕವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರಗಳು ಬಡವರ ಹಾಗೂ ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಸಹಕಾರ ನೀಡಬೇಕು. ಅನೇಕ ರಾಜ್ಯಗಳು ಜಿಎಸ್ ಟಿ ಕಡಿತಕ್ಕೆ ಆಗ್ರಹಿಸುತ್ತಿದ್ದವು. ಆದರೆ, ತಮ್ಮ ಪಾಲಿನ ಆದಾಯ ಬಿಟ್ಟು ಕೊಡಲು ಒಪ್ಪುತ್ತಿಲ್ಲ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande