ಜಿಎಸ್‌ಟಿ ಸರಳೀಕರಣ ಹಬ್ಬದ ಉಡುಗೊರೆ : ಮಹೇಶ್ ಟೆಂಗಿನಕಾಯಿ
ಬೆಂಗಳೂರು, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಎಸ್‌ಟಿ ಸರಳೀಕರಣ ಮಾಡಿ ದೇಶದ ಜನತೆಗೆ ಕೇಂದ್ರ ಸರಕಾರ ದೇಶದ ಜನತೆಗೆ ದಸರಾ–ದೀಪಾವಳಿಯ ಉಡುಗೊರೆ ನೀಡಿದೆ ಎಂದು ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಡವರು, ಮಧ್
ಜಿಎಸ್‌ಟಿ ಸರಳೀಕರಣ ಹಬ್ಬದ ಉಡುಗೊರೆ : ಮಹೇಶ್ ಟೆಂಗಿನಕಾಯಿ


ಬೆಂಗಳೂರು, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಎಸ್‌ಟಿ ಸರಳೀಕರಣ ಮಾಡಿ ದೇಶದ ಜನತೆಗೆ ಕೇಂದ್ರ ಸರಕಾರ ದೇಶದ ಜನತೆಗೆ ದಸರಾ–ದೀಪಾವಳಿಯ ಉಡುಗೊರೆ ನೀಡಿದೆ ಎಂದು ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಹೇಳಿದ್ದಾರೆ.

ವಿಧಾನ ಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಡವರು, ಮಧ್ಯಮ ವರ್ಗದ ಪರ ಇರುವವರು. ಜಿಎಸ್‌ಟಿಯಲ್ಲಿ ಬದಲಾವಣೆ ಮಾಡಿ ಜನರಿಗೆ ನೆರವಾಗಿದ್ದಾರೆ. ಕ್ಯಾನ್ಸರ್ ಔಷಧಿಗಳ ಮೇಲಿನ ತೆರಿಗೆ ಕೈಬಿಟ್ಟಿದ್ದಾರೆ. ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಜಿಎಸ್‌ಟಿ ಇಳಿಕೆಯ ಮೂಲಕ ದೊಡ್ಡ ಕೊಡುಗೆ ನೀಡಿದ್ದಾರೆ. ಈ ಕ್ರಮಕ್ಕೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande