ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ವಿಜಯಪುರ, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿ ನಾನಾ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾ
ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ವಿಜಯಪುರ, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿ ನಾನಾ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜ‌ನೆ, ಬ್ಯಾಂಕಿನ ಸಹಯೋಗದೊಂದಿಗೆ ಉದ್ಯಮಶೀಲತಾ ಯೋಜನೆ,ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಪ್ರೇರಣಾ ಮ್ಯಕ್ರೋ ಕ್ರೆಡಿಟ್ ಯೋಜನೆಗಳಡಿ ಅರ್ಜಿಯನ್ನು ಆನಲೈನ್ ಮೂಲಕ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.

2023-24 ಮತ್ತು 2024-25ನೇ ಸಾಲಿನಲ್ಲಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande