ಹುಬ್ಬಳ್ಳಿ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ತಾಲ್ಲೂಕು ಆಡಳಿತದಿಂದ ಸೆಪ್ಟೆಂಬರ್ 17 ರಂದು ಶ್ರೀ ವಿಶ್ವಕರ್ಮ ಜಯಂತಿಯನ್ನು ಆಚರಿಸುವ ಹಿನ್ನೆಲೆಯಲ್ಲಿ ಜಯಂತಿ ಪೂರ್ವಭಾವಿ ಸಭೆಯನ್ನು ಸೆಪ್ಟೆಂಬರ್ 9 ರಂದು ಸಂಜೆ 4 ಗಂಟೆಗೆ ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಾನಾ ಸಂಘ, ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಹುಬ್ಬಳ್ಳಿ ನಗರ ತಹಶೀಲ್ದಾರರಾದ ಮಹೇಶ್ ಗಸ್ತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa