ಗದಗ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಾದ್ಯಂತ ನಾಳೆ ಈದ್ ಮಿಲಾದ್ ಹಬ್ಬದ ಅಂಗವಾಗಿ ಮೆರವಣಿಗೆ ಹಾಗೂ ಸಮಾರಂಭಗಳು ಜರುಗುತ್ತಿದ್ದು ಆ ಕಾಲಕ್ಕೆ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಲಾಗಿದೆ.
ಸದರ ದಿನಗಳಂದು ಗದಗ ಜಿಲ್ಲೆಯ ಯಾವತ್ತೂ ಬಾರುಗಳು, ಕ್ಲಬ್ಬುಗಳು, ಬಿಯರ್, ಭಾರತೀಯ ತಯಾರಿಕೆಯ ಮದ್ಯದ ಅಂಗಡಿಗಳನ್ನು ಮೇಲ್ಕಾಣಿಸಿದ ಅವಧಿಯಲ್ಲಿ ಮುಚ್ಚತಕ್ಕದ್ದು. ಅಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ವಲಯ ಅಬಕಾರಿ ಇನ್‌ಪೆಕ್ಟರ್ ಹಾಗೂ ಅಬಕಾರಿ ಉಪ-ಆಯುಕ್ತರು, ಕರ್ನಾಟಕ ಅಬಕಾರಿ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP