ಬಳ್ಳಾರಿ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : `ಗ್ಯಾರಂಟಿ'ಗಳಿಂದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಸರ್ಕಾರ ಬಡವರು ಸೇರಿದಂತೆ ದೇಶಕ್ಕೆ ಅನ್ನ ನೀಡುವ ರೈತರನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಆರೋಪಿಸಿದ್ದಾರೆ.
ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ನಮ್ಮ ರೈತರು ರಸಗೊಬ್ಬರಕ್ಕಾಗಿ ಅಂಗಡಿಗಳ ಮುಂದೆ ಮಳೆ-ಗಾಳಿ ಮತ್ತು ಛಳಿಯಲ್ಲಿ ಹಗಲೂ - ರಾತ್ರಿ ನಿಲ್ಲುವ -ಮಲಗುವ ಸ್ಥಿತಿ ಎದುರಾಗಿದೆ ಎಂದರು.
ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲು ಮತದಾರರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ದೇಶದ - ರಾಜ್ಯದ ಭವಿಷ್ಯದ ಹಿನ್ನಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಪಕ್ಷದ ತತ್ವ, ಸಿದ್ದಾಂತಗಳನ್ನು, ನಾಯಕತ್ವವನ್ನು ಒಪ್ಪಿ ಬರುವ ಎಲ್ಲರಿಗೂ ಸ್ವಾಗತ ಎಂದರು.
ಜೆಡಿಎಸ್‍ಗೆ ಸೇರ್ಪಡೆ: ಬಳ್ಳಾರಿ ಕೋಟೆ, ಬಸವನ ಕುಂಟೆ, ದೇವಿನಗರ ಸೇರಿದಂತೆ ನಗರದ ವಿವಿಧ ಭಾಗದಗಳ ಮುಖಂಡರು, ಕಾರ್ಯಕರ್ತರು ಯುವ ಮುಖಂಡ ವಸಂತ ಕುಮಾರ್ ಅವರ ನೇತೃತ್ವದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಸೇರ್ಪಡೆಯಾದರು.
ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜೆ. ಪುಷ್ಪ, ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಜಮೀಲಾ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಾಗವೇಣಿ, ರಾಜ್ಯ ಉಪಾಧ್ಯಕ್ಷೆಯಾಗಿ ಸಬಾನ ಅವರನ್ನು ರಾಜ್ಯಾಧಕ್ಷರಾದ ರಶ್ಮಿ ರಾಮೇಗೌಡ ಅವರು ನೇಮಕ ಮಾಡಿ ಆದೇಶ ಹೊರಡಿಸಿದರು.
ಜೆಡಿಎಸ್ ರೈತ ಘಟಕದ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತರೆಡ್ಡಿ, ನಗರ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಸಿರಗುಪ್ಪ ಅಧ್ಯಕ್ಷ ಶಿವನಾರಾಯಣ, ಕಂಪ್ಲಿ ಅಧ್ಯಕ್ಷ ಮೇಘರಾಜ, ಗ್ರಾಮಿಣ ಅಧ್ಯಕ್ಷ ಅಶೋಕ್, ಜಿಲ್ಲ ಕಾರ್ಯಾಧ್ಯಕ್ಷ ಮದಿರೆ ವಿಜಯಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್, ನೀಲಾ, ರಹಿಮತ್, ಜಯ ಲಕ್ಷ್ಮಿ, ವಿಜಯ, ರೂಮಾನ, ಲಕ್ಷ್ಮಿ ಇತರರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್