ಯುವಕ ಸಾವು ; ನೌಕರಿಗಾಗಿ ಪ್ರತಿಭಟನೆ
ವಿಜಯಪುರ, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗಣೇಶ ವಿಸರ್ಜನೆ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಕುಟುಂಬಕ್ಕೆ ನೌಕರಿ ನೀಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಾಗೃತ ಹಿಂದೂ ಮಂಚ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸೆಪ್ಟೆಂಬರ್ 3ರಂದು ನಗರದಲ್ಲಿ ಗ
ಪ್ರತಿಭಟನೆ


ವಿಜಯಪುರ, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗಣೇಶ ವಿಸರ್ಜನೆ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಕುಟುಂಬಕ್ಕೆ ನೌಕರಿ ನೀಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಾಗೃತ ಹಿಂದೂ ಮಂಚ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಸೆಪ್ಟೆಂಬರ್ 3ರಂದು ನಗರದಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುಭಂ ಸಂಕಪಾಳ ಅಸುನೀಗಿದ್ದಾನೆ. ಬಡ ಕುಟುಂಬವಾಗಿದ್ದು, ತಂದೆ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಕುಟುಂಬ ನಿರ್ವಹಣೆ ನಡೆಸಲು ಅಸಾಧ್ಯವಾಗುತ್ತಿದೆ. ಅದಕ್ಕಾಗಿ ಹೆಸ್ಕಾಂನಲ್ಲಿ ಕುಟುಂಬ ಸದಸ್ಯರಿಗೆ ನೌಕರಿ ನೀಡಬೇಕು. ‌ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಇದೇ ವೇಳೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande