ರಾಯಚೂರು, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2025-26ನೇ ಸಾಲಿಗೆ ಕುಶಲಕರ್ಮಿಗಳ ತರಬೇತಿ ಸಂಘಗಳ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿರುದ್ಯೋಗ ಯುವಕ ಯುವತಿಯರಿಗೆ ಲಘು ಮೋಟಾರ್ ಡ್ರೈವಿಂಗ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ್ಲ ನಾನಾ ತಾಲೂಕುಗಳಾದ ರಾಯಚೂರ 22, ಮಾನವಿ 18, ಸಿರವಾರ 16, ಸಿಂಧನೂರು 18, ಮಸ್ಕಿಂ 15, ಲಿಂಗಸುಗೂರು 18, ದೇವದುರ್ಗ 18 ಸೇರಿದಂತೆ ಒಟ್ಟು 125 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು.
ದಾಖಲೆಗಳು: ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣ ಪತ್ರ). ಶೈಕ್ಷಣಿಕ ಅರ್ಹತೆ: ಕನಿಷ್ಠ 10ನೇ ತರಗತಿ ಪಾಸಾಗಿರಬೇಕು (ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣ ಪತ್ರ), ಜಾತಿ ಪ್ರಮಾಣ ಪತ್ರ (ಪ.ಜಾತಿ, ಪಂ.ಪಂಗಡ & ಅಲ್ಪಸಂಖ್ಯಾತರಿಗೆ ಮಾತ್ರ). ವಿಕಲಚೇತನ/ವಿಧವೆ ಪ್ರಮಾಣ ಪತ್ರ (ವಿಕಲಚೇತನ/ವಿಧವೆಯರಾಗಿದ್ದಲ್ಲಿ). ಚಾಲ್ತಿಯಲ್ಲಿರುವ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ವಾಸಸ್ಥಳ ಪ್ರಮಾಣ ಪತ್ರ. ಪಾಸ್‍ಪೋರ್ಟ್ ಗಾತ್ರದ ಭಾವಚಿತ್ರದೊಂದಿಗೆ ಕನಿಷ್ಠ 18 ವರ್ಷ ತುಂಬಿರಬೇಕು, ಗರಿಷ್ಠ 45ವರ್ಷ ಮೀರಿರಬಾರದು. ಅಂತಹ ಅಭ್ಯರ್ಥಿಗಳು ವೆಬ್‍ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ, ಉಪ ನಿರ್ದೇಶಕರು (ಗ್ರಾಮೀಣ ಕೈಗಾರಿಕೆ) ಅವರ ಕಚೇರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಿಲ್ಲಾ ಪಂಚಾಯತ್, ಹೈದಾರಬಾದ ರಸ್ತೆ, ರಾಯಚೂರು ದೂರವಾಣಿ-08532-200946 ಅಥವಾ 8105044597ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್