ಬಳ್ಳಾರಿ : ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಥಳಿ
ಬಳ್ಳಾರಿ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಂಗೊಳ್ಳಿ ರಾಯಣ್ಣ ಅವರ ಫೈಬರ್ ಪುತ್ಥಳಿ ಇದ್ದು, ಕಂಚಿನ ಪುತ್ಥಳಿಯನ್ನು ನಿರ್ಮಿಸಿ ಶೀಘ್ರದಲ್ಲೇ ಸೂಕ್ತ ಸ್ಥಳದಲ್ಲಿ ಸ್ಥಾಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು ತಿಳಿಸಿದ್ದಾರೆ. ಡಾ. ಜೋಳದರಾಶಿ ದೊಡ್ಡನಗೌಡ ರಂಗ
ಬಳ್ಳಾರಿ : ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಥಳಿ


ಬಳ್ಳಾರಿ : ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಥಳಿ


ಬಳ್ಳಾರಿ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಂಗೊಳ್ಳಿ ರಾಯಣ್ಣ ಅವರ ಫೈಬರ್ ಪುತ್ಥಳಿ ಇದ್ದು, ಕಂಚಿನ ಪುತ್ಥಳಿಯನ್ನು ನಿರ್ಮಿಸಿ ಶೀಘ್ರದಲ್ಲೇ ಸೂಕ್ತ ಸ್ಥಳದಲ್ಲಿ ಸ್ಥಾಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು ತಿಳಿಸಿದ್ದಾರೆ.

ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಎದುರಲ್ಲಿ ಇರುವ `ಸಂಗೊಳ್ಳಿ ರಾಯಣ್ಣ' ಅವರ ಪ್ರತಿಮೆಯ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿ, ಕುರುಬ ಸಮುದಾಯದ ಮುಖಂಡರು ಹಾಗೂ ವೀರಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಹೋರಾಟ ಸಮಿತಿಯ ಮುಖಂಡರೊಂದಿಗೆ ಮಾತುಕತೆ ನಡೆಸಿ, ಫೈಬರ್ ಪುತ್ಥಳಿಗೆ ಬದಲಾಗಿ ಕಂಚಿನ ಪುತ್ಥಳಿಯನ್ನು ಶೀಘ್ರದಲ್ಲಿಯೇ ನಿರ್ಮಾಣ ಮಾಡಲಾಗುತ್ತದೆ ಎಂದರು.

ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಗೆ ಈ ಹಿಂದಿನ ಸರ್ಕಾರ ಹಾಗೂ ಕಾನೂನಾತ್ಮಕವಾಗಿ ಅನುಮತಿಗಳನ್ನು ಪಡೆದಿರಲಿಲ್ಲ. ಕಾರಣ ಪುತ್ಥಳಿ ಅನಾವರಣಗೊಂಡಿಲ್ಲ. ಈ ಬಗ್ಗೆ ಕುರುಬ ಸಮಾಜದ ಮುಖಂಡರ ಜೊತೆಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಗಮನಕ್ಕೆ ತಂದು, ಸಚಿವ ಸಂಪುಟ ಸಭೆಯಲ್ಲಿ ಪುತ್ಥಳಿ ಅನಾವರಣಕ್ಕೆ ಅನುಮತಿ ಪಡೆಯಲಾಗಿದೆ ಎಂದರು.

ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಡಾ. ಗಾದಿಲಿಂಗನಗೌಡ, ಮಾಜಿ ಮೇಯರ್ ಎಂ. ರಾಜೇಶ್ವರಿ, ಮಾಜಿ ಉಪ ಮೇಯರ್ ಬೆಣಕಲ್ ಬಸವರಾಜಗೌಡ, ಹೋರಾಟ ಸಮಿತಿಯ ಇಟ್ಟಂಗಿ ಭಟ್ಟಿ ಯರಿಸ್ವಾಮಿ, ಕೆ. ಮೋಹನ್, ಎಂ. ಸುಬ್ಬರಾಯುಡು, ಬೆಣಕಲ್ ಮಂಜುನಾಥ, ಕೆ. ಯಶೋಧಾ, ಕೊಳಗಲ್ಲು ಅಂಜಿನಿ, ಸುರೇಂದ್ರಗೌಡ, ಕವಿತಾ ಸೇರಿ ಅನೇಕರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande