ಭಾನುವಾರ ಮೈಸೂರಿನಲ್ಲಿ ಭಗೀರಥ ಸಮಾಜದ ಸಭೆ
ಬಳ್ಳಾರಿ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ಆಡಳಿತ ಮಂಡಳಿಯ ಸಭೆಯು ಪಿ. ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಬೆಳಿಗ್ಗೆ 11.00 ಗಂಟೆಗೆ ಮೈಸೂರಿನ ಸರಸ್ವತಿಪುರಂನ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಸಮಾಜದ
ಮೈಸೂರಿನಲ್ಲಿ ಸೆಪ್ಟಂಬರ್ 7ರ ಭಾನುವಾರ ಭಗೀರಥ ಸಮಾಜದ ಸಭೆ


ಬಳ್ಳಾರಿ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ಆಡಳಿತ ಮಂಡಳಿಯ ಸಭೆಯು ಪಿ. ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಬೆಳಿಗ್ಗೆ 11.00 ಗಂಟೆಗೆ ಮೈಸೂರಿನ ಸರಸ್ವತಿಪುರಂನ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಸಮಾಜದ ಆಗುಹೋಗುಗಳು, ಗಣತಿ, ಶಿಕ್ಷಣ, ಸ್ವಾವಲಂಭನೆ ಇನ್ನಿತರೆ ವಿಷಯಗಳ ಕುರಿತು ಸಮಗ್ರವಾಗಿ `ಚಿಂತನ-ಮಂಥನ' ನಡೆಸಲಾಗುತ್ತದೆ. ಈ ಸಭೆಯಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು - ಆಜೀವ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಬಳ್ಳಾರಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರಾದ ಪುರುಷೋತ್ತಮ ಮತ್ತು ಗೋವಿಂದ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande