ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರವನ್ನು ಬೀಡಿಗೆ ಹೋಲಿಸಿದ ಕೇರಳ ಕಾಂಗ್ರೆಸ್ ಘಟಕದ ಪೋಸ್ಟ್ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಇದನ್ನು ಬಿಹಾರದ ಅವಮಾನವೆಂದು ಕರೆದಿದ್ದು, ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಮೌನವಾಗಿರುವುದನ್ನು ಪ್ರಶ್ನಿಸಿದೆ. ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ಕಾಂಗ್ರೆಸ್ ಮೊದಲು ಪ್ರಧಾನಿ ಮೋದಿಯವರ ತಾಯಿಯನ್ನು ಅವಮಾನಿಸಿತು, ಈಗ ಬಿಹಾರವನ್ನು ಬೀಡಿಗೆ ಹೋಲಿಸಿದೆ ಎಂದು ಕಿಡಿಕಾರಿದ್ದಾರೆ.
ಜೆಡಿಯು ಹಾಗೂ ಬಿಜೆಪಿ ನಾಯಕರು ಬಿಹಾರದ ಇತಿಹಾಸ, ಪರಂಪರೆ ಮತ್ತು ಸ್ವಾತಂತ್ರ್ಯ ಹೋರಾಟದ ಕೊಡುಗೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಾದ ಹೆಚ್ಚುತ್ತಿದ್ದಂತೆ ಕೇರಳ ಕಾಂಗ್ರೆಸ್ ಪೋಸ್ಟ್ ಅಳಿಸಿ ಕ್ಷಮೆಯಾಚಿಸಿದ್ದು, “ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇವೆ” ಎಂದು ಸ್ಪಷ್ಟಪಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa