ಕೊಪ್ಪಳ, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮವನ್ನು ಸೆಪ್ಟೆಂಬರ್ 8ರಂದು ಬೆಳಿಗ್ಗೆ 8 ಗಂಟೆಗೆ ತಳಕಲ್ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಪ್ರಸ್ತುತ ಸಾಲಿನ ಲಿಂಕ್ ಡಾಕ್ಯುಮೆಂಟ್ ಅನುದಾನದಡಿ ಮೂಲ ಸಾಕ್ಷರತಾ ಕಾರ್ಯಕ್ರಮವನ್ನು `ನಮ್ಮ ನಡೆ-ಸಂಪೂರ್ಣ ಸಾಕ್ಷರತೆಯ ಕಡೆಗೆ' ಎಂಬ ಧ್ಯಯ ವಾಕ್ಯದೊಂದಿಗೆ ಕುಕನೂರು ತಾಲೂಕಿನ ತಳಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಕಾರ್ಯ ನಿರ್ವಾಹಕಾಧಿಕಾರಿ ವರ್ಣಿತ್ ನೇಗಿ ಅವರು ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ಕಾರ್ಯಕ್ರಮ ನೆರವೆಸುವರು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್