ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿಗೆ ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್ ಕೇನ ಹಾರ್ವೆಸ್ಟರ್ ಹಬ್ ಗಳನ್ನು ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ವಿತರಿಸಲು ವೈಯಕ್ತಿಕ ಫಲಾನುಭವಿಗಳಿಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ,18 ಕೊನೆಯ ದಿನಾಂಕವಾಗಿದೆ.
ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದಡಿ ವೈಯಕ್ತಿಕ ಫಲಾನುಭವಿಗಳಿಗೆ ಶುಗರ್ ಕೇನ ಹಾರ್ವೆಸ್ಟರ್ ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ಯಂತ್ರೋಪಕರಣ ಖರೀದಿಸಲು ಆದ್ಯತೆ ಹಾಗೂ ಅನುದಾನ ಲಭ್ಯತೆ ಮೇರೆಗೆ ಸಹಾಯಧನ ಒದಗಿಸಲಾಗುವುದು. ಆಸಕ್ತರು, ತಮ್ಮ ಅರ್ಜಿಗಳನ್ನು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande