ಸೆಪ್ಟೆಂಬರ್ 6ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್
ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನಾನಾ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸಲಾಗುತ್ತಿದ್ದು, ಇದೇ ಸೆಪ್ಟೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ನಾನಾ 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾ
ಸೆಪ್ಟೆಂಬರ್ 6ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್


ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನಾನಾ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸಲಾಗುತ್ತಿದ್ದು, ಇದೇ ಸೆಪ್ಟೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ನಾನಾ 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಅವರು ತಿಳಿಸಿದ್ದಾರೆ.

ವಿಜಯಪುರ ಉಪ ವಿಭಾಗಾಧಿಕಾರಿಗಳು ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದ ಮಾರುತಿ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಸಿಂದಗಿ ತಾಲೂಕಿನ ಚಾಂದಕವಠೆ ಗ್ರಾಮದ ಪಂಚಾಯತಿ ಕಾರ್ಯಾಲದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ವಿಜಯಪುರ ನಗರದ ಕಸಬಾ ಚಾವಡಿ ಜೆ.ಎಂ.ರಸ್ತೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಕಾರ್ಯಾಲಯದಲ್ಲಿ, ಹಾಗೂ ತಿಕೋಟಾ ಗ್ರೇಡ್-2 ತಹಶೀಲ್ದಾರ ಅವರು ಯತ್ನಾಳ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.

ಬಬಲೇಶ್ವರ ಗ್ರೇಡ್-2 ತಹಶೀಲ್ದಾರ ಅವರು ಹೊಸೂರ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ಬಸವನಬಾಗೇವಾಡಿ ಗ್ರೇಡ್-2 ತಹಶೀಲ್ದಾರ ಅವರು ನಾಗೂರ ಗ್ರಾಮದ ಶ್ರೀ ಮಲ್ಲಯ್ಯನ ಗುಡಿಯಲ್ಲಿ, ನಿಡಗುಂದಿ ತಹಶೀಲ್ದಾರ ಅವರು ಹುಣಶ್ಯಾಳ ಪಿ.ಸಿ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ, ಕೊಲ್ಹಾರ ತಹಶೀಲ್ದಾರ ಅವರು ಚಿಕ್ಕ ಆಸಂಗಿ ತಾಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಾಗೂ ಮುದ್ದೇಬಿಹಾಳ ಗ್ರೇಡ್-2 ತಹಶೀಲ್ದಾರ ಅವರು ಬೂದಿಹಾಳ ಪಿ.ಎನ್.ನ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.

ತಾಳಿಕೋಟೆ ಗ್ರೇಡ್-2 ತಹಶೀಲ್ದಾರ ಅವರು ಗುತ್ತಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಇಂಡಿ ಗ್ರೇಡ್-2 ತಹಶೀಲ್ದಾರ ಅವರು ಅಗಸನಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ಚಡಚಣ ತಹಶೀಲ್ದಾರ ಅವರು ಗೋಟ್ಯಾಳ ಗ್ರಾಮದ ಜಹಾಂಗೀರಸಾಬ ದರ್ಗಾದಲ್ಲಿ, ಸಿಂದಗಿ ಗ್ರೇಡ್-2 ತಹಶೀಲ್ದಾರ ಅವರು ಬಸ್ತಿಹಾಳ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ದೇವರಹಿಪ್ಪರಗಿ ತಹಶೀಲ್ದಾರ ಅವರು ಜಾಲವಾದ ಎಲ್.ಟಿ. ನಂ.2 ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಹಾಗೂ ಆಲಮೇಲ ಗ್ರೇಡ್-2 ತಹಶೀಲ್ದಾರ ಅವರು ಕುರುಬತಳ್ಳಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande