ರಾಯಚೂರು, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆಯ ಹಳೆಯ ನಗರಸಭೆಯ ಕಟ್ಟಡದಲ್ಲಿ ಮಾಜಿ ಸೈನಿಕರ ಸಂಘದ ಕಾರ್ಯಾಲಯವನ್ನು ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಿಗಿರಿ ಅವರು ಉದ್ಘಾಟಿಸಿದ್ದಾರೆ.
ಈ ವೇಳೆ ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸಾಜೀದ ಸಮೀರ ಅವರು ಮಾತನಾಡಿ, ಮಾಜಿ ಸೈನಿಕರ ಸಂಘಕ್ಕೆ ನಿಯಮದಡಿಯಲ್ಲಿ ಮಹಾನಗರ ಪಾಲಿಕೆಯ ಸೌಲಭ್ಯಗಳನ್ನು ಒದಗಿಸಲಾಗುವುದು. ನಿಯಮದಡಿ ಅವಕಾಶವಿಲ್ಲದಿದ್ದಲ್ಲಿ ಸರ್ವ ಸದಸ್ಯರ ಸಹಕಾರ ಪಡೆದು ಬೇಡಿಕೆ ಈಡೇರಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷ ರಾಣಿ ಅವರು ಮಾತನಾಡಿ, ಪಾಲಿಕೆಯ ಆಯುಕ್ತರೊಂದಿಗೆ ಚರ್ಚಿಸಿ ಮಾಜಿ ಸೈನಿಕರ ಸಂಘಕ್ಕೆ ಬೇರೆ ಬೇರೆ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಎನ್.ಸಿ.ಸಿ ಕಮಾಂಡೆಂಟ್ ಅಧಿಕಾರಿಗಳು, ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು, ಮಾಜಿ ಸೈನಿಕರ ಕುಟುಂಬದ ಸದಸ್ಯರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್