ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭಾರತ-ಸಿಂಗಾಪುರ ರಕ್ಷಣಾ ಕಾರ್ಯಕಾರಿ ಗುಂಪಿನ 16ನೇ ಸಭೆಯಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಕಾರದ ಪ್ರಗತಿಯನ್ನು ಪರಿಶೀಲಿಸಿ ಎರಡೂ ಕಡೆಯವರು ತೃಪ್ತಿ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ನಡುವಿನ ಮಾತುಕತೆಯ ನಂತರ ನಡೆದ ಈ ಸಂವಾದದಲ್ಲಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿ ಚರ್ಚಿಸಲಾಯಿತು.
ತರಬೇತಿ, ಸಾಮರ್ಥ್ಯ ವೃದ್ಧಿ, ಕೈಗಾರಿಕೆ-ತಂತ್ರಜ್ಞಾನ, ಕಡಲ ಭದ್ರತೆ ಹಾಗೂ ಬಹುರಾಷ್ಟ್ರೀಯ ಸಹಕಾರ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಒಪ್ಪಿಗೆ ವ್ಯಕ್ತವಾಯಿತು. 2025ರಲ್ಲಿ ಭಾರತ-ಸಿಂಗಾಪುರ ರಾಜತಾಂತ್ರಿಕ ಸಂಬಂಧಗಳ 60 ವರ್ಷಗಳನ್ನು ಪೂರೈಸುವ ಸಂದರ್ಭ ರಕ್ಷಣಾ ಸಹಕಾರವನ್ನು ಮತ್ತಷ್ಟು ಗಟ್ಟಿಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಯಿತು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa