ರಾಯಚೂರು, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕೃಷ್ಣ ನದಿಭಾಗದ ಐದಬಾವಿಯಿಂದ ತಿಂತಿಣಿ ಬ್ರಿಡ್ಜ್‍ವರೆಗೆ ಮೀನುಗಾರಿಕೆ ಪರವಾನಿಗೆಗಾಗಿ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರವಾನಿಗೆಯನ್ನು ಕಚೇರಿಯಲ್ಲ್ಲಿ ನೀಡಲಾಗುತ್ತಿದ್ದು, ಸ್ಥಳೀಯ ಅರ್ಹ ಮೀನುಗಾರರು ವಾಸಸ್ಥಳ ಗುರುತಿನ ಚೀಟಿಯೊಂದಿಗೆ ನಿಗದಿತ ಶುಲ್ಕ ಪಾವತಿಸಿ ಪರವಾನಿಗೆ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಲಿಂಗಸುಗೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಲಿಂಗಸುಗೂರಿನ ಮೀನುಗಾರಿಕೆಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್