ರಾಯಚೂರು, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅವರು ಸೆಪ್ಟೆಂಬರ್ 11ರ ಮಧ್ಯಾಹ್ನ 3.30ಕ್ಕೆ ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರೊಂದಿಗೆ ಸಮಾಲೋಚನೆ ಮತ್ತು ಕುಂದು-ಕೊರತೆ ಸಭೆ ನಡೆಸಲಿದ್ದಾರೆ. ಈ ಸಭೆಗೆ ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್