ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಧಾನ
ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯ್ಕೆಯಾದ ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ–2025 ಪ್ರದಾನ ಮಾಡಿದರು. ಶಿಕ್ಷಣವು ಆಹಾರ, ಬಟ್ಟೆ, ವಸತಿಯಂತೆಯೇ ವ್ಯಕ್ತಿಯ ಘನತೆ
President


ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯ್ಕೆಯಾದ ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ–2025 ಪ್ರದಾನ ಮಾಡಿದರು.

ಶಿಕ್ಷಣವು ಆಹಾರ, ಬಟ್ಟೆ, ವಸತಿಯಂತೆಯೇ ವ್ಯಕ್ತಿಯ ಘನತೆ ಮತ್ತು ಭದ್ರತೆಗೆ ಅವಶ್ಯಕ ಎಂದು ರಾಷ್ಟ್ರಪತಿ ಹೇಳಿದರು. ಸೂಕ್ಷ್ಮ ಸಂವೇದನೆಯ ಶಿಕ್ಷಕರು ಮಕ್ಕಳಲ್ಲಿ ಘನತೆ ಮತ್ತು ಸುರಕ್ಷತೆಯ ಭಾವನೆ ಮೂಡಿಸುತ್ತಾರೆ ಎಂದು ಅವರು ಶ್ಲಾಘಿಸಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಒತ್ತಾಯಿಸಿದ ರಾಷ್ಟ್ರಪತಿ, ಗ್ರಾಮೀಣ ಪ್ರದೇಶದ ಹೆಚ್ಚಿನ ಶಿಕ್ಷಕರು ಪ್ರಶಸ್ತಿ ಪಡೆದಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಭಾರತವನ್ನು “ಜಾಗತಿಕ ಜ್ಞಾನ ಸೂಪರ್ ಪವರ್” ಆಗಿ ರೂಪಿಸುವುದು ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande