ಈದ್ ಮಿಲಾದ ಹಬ್ಬಕ್ಕೆ ರಾಷ್ಟ್ರಪತಿ ಶುಭಾಶಯ
ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರವಾದಿ ಮುಹಮ್ಮದ್ ರವರ ಜನ್ಮದಿನವಾದ ಮಿಲಾದ್-ಉನ್-ನಬಿಯ ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ನಮ್ಮ
President


ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರವಾದಿ ಮುಹಮ್ಮದ್ ರವರ ಜನ್ಮದಿನವಾದ ಮಿಲಾದ್-ಉನ್-ನಬಿಯ ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ನಮ್ಮ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಪ್ರವಾದಿ ಮುಹಮ್ಮದ್ (ಸ.ಅ.ಸ) ಅವರು ಮಾನವೀಯತೆಗೆ ಏಕತೆ ಮತ್ತು ಸೇವೆಯ ಸಂದೇಶವನ್ನು ನೀಡಿದರು. ಈ ಶುಭ ಸಂದರ್ಭದಲ್ಲಿ, ನಾವು ಅವರ ಬೋಧನೆಗಳಿಂದ ಸ್ಫೂರ್ತಿ ಪಡೆದು ಸಹೋದರತ್ವದ ಮನೋಭಾವದಲ್ಲಿ ಮುಂದುವರಿಯಲು ಪ್ರತಿಜ್ಞೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande