ರಾಯಚೂರು : ನಾಳೆ ಜೆಸ್ಕಾಂನಿಂದ ಗ್ರಾಹಕರ ಸಭೆ
ರಾಯಚೂರು, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 6ರ ಬೆಳಿಗ್ಗೆ 10 ಗಂಟೆಗೆ ಗ್ರಾಹಕರ ಕುಂದುಕೊರತೆ ಸಭೆಯನ್ನು ಅಧೀಕ್ಷಕ ಅಭಿಯಂತರರ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಗೆ ರಾಯಚೂರು ಗ್ರಾಮೀಣ ಉಪ ವಿಭಾ
ರಾಯಚೂರು : ನಾಳೆ ಜೆಸ್ಕಾಂನಿಂದ  ಗ್ರಾಹಕರ ಸಭೆ


ರಾಯಚೂರು, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 6ರ ಬೆಳಿಗ್ಗೆ 10 ಗಂಟೆಗೆ ಗ್ರಾಹಕರ ಕುಂದುಕೊರತೆ ಸಭೆಯನ್ನು ಅಧೀಕ್ಷಕ ಅಭಿಯಂತರರ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಸಭೆಗೆ ರಾಯಚೂರು ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande