ಹೊಸಪೇಟೆ, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಬಸ್ಸು ಹಾಗೂ ರೈಲಿನ ವ್ಯವಸ್ಥೆ ಕಲ್ಪಿಸಲಾಗುವುದು.
ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ ಲಿಂಕ್ ಆನ್‍ಲೈನ್ ಮೂಲಕ ಸೆ.9 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಹೊಸಪೇಟೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್