ಕೊಪ್ಪಳ, 06 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ನಿರ್ದೇಶನದನ್ವಯ ರಾಜ್ಯದಲ್ಲಿ ಆದಿ ಕರ್ಮಯೋಗಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಮೂರು ದಿನಗಳ ಕಾಲ ವಸತಿ ಸಹಿತವಾಗಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಸೆಪ್ಟೆಂಬರ್ 8 ರಿಂದ 10 ರವರೆಗೆ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೊಗಲದ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್