ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 8 ರವರೆಗೆ ವಿಸ್ತರಿಸಲಾಗಿದೆ. ಕೆ.ಕಿಸಾನ್ ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಅರ್ಜಿ ಸಲ್ಲಿಸಲು ತೊಂದರೆಯಾಗಿದ
ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕೊಪ್ಪಳ, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 8 ರವರೆಗೆ ವಿಸ್ತರಿಸಲಾಗಿದೆ.

ಕೆ.ಕಿಸಾನ್ ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಅರ್ಜಿ ಸಲ್ಲಿಸಲು ತೊಂದರೆಯಾಗಿದ್ದು, ಆಸಕ್ತ ರೈತ ಮತ್ತು ರೈತ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಅವಕಾಶವನ್ನು ಎಲ್ಲಾ ರೈತ ಬಾಂಧವರು ಸದುಪಯೋಗಪಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande